ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಹಲವು ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದೀಗ ಪ್ರಕರಣ A-13 ದೀಪಕ್ ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್ ಆಗಿದ್ದಾನೆ.
A-13 ದೀಪಕ್ಗೆ ಕೋರ್ಟ್ ಕಳೆದ ಸೋಮವಾರ ಜಾಮೀನು ಮಂಜೂರು ಮಾಡಿತ್ತು.ಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನಲೆ ಷರತ್ತುಗಳನ್ನು ಪೂರೈಸಿ ನಿನ್ನೆ ರಾತ್ರಿ ಬೇಲ್ ಕಾಪಿ ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳ ಕೈ ಸೇರಿತ್ತು. ಹೀಗಾಗಿ ಡಿ ಗ್ಯಾಂಗ್ ಮತ್ತೊಬ್ಬ ಆರೋಪಿ ರಿಲೀಸ್ ಆಗಿದ್ದಾನೆ.
ಇನ್ನು ದರ್ಶನ್ ಹಾಗೂ ಪವಿತ್ರಾ ಗೌಡ ಪರ ವಕೀಲರು ಬೇಲ್ಗಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು ಸೆಷನ್ಸ್ ಕೋರ್ಟ್ ವಜಾಗೊಳಿಸಿತ್ತು. ಅಕ್ಟೋಬರ್ 14ರಂದು ಜಾಮೀನು ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ದರ್ಶನ್ ಭಾರೀ ನಿರಾಸೆಯಾಗಿತ್ತು.
ಜಾಮೀನು ಅರ್ಜಿ ವಜಾ ಬೆನ್ನಲ್ಲೇ ದರ್ಶನ್ ಜಾಮೀನು ವಜಾ ಆದೇಶ ಪ್ರತಿ ಪಡೆದ ವಕೀಲರು ಹೈಕೋರ್ಟ್ನಲ್ಲಿ ಬೇಲ್ ಅರ್ಜಿ ಸಲ್ಲಿಕೆ ಮಾಡಿದ್ರು. ಇದೀಗ ಹೈಕೋರ್ಟ್ನಲ್ಲಿ ದರ್ಶನ್ ಬೇಲ್ ಅರ್ಜಿ ವಿಚಾರಣೆ ಅಕ್ಟೋಬರ್ 22ರಂದು ನಡೆಯಲಿದೆ.
ಇದನ್ನೂ ಓದಿ : ಬೆಂಗಳೂರಲ್ಲಿ ರೋಹಿತ್ ಪಡೆಗೆ ಮುಖಭಂಗ – ಕಿವೀಸ್ ವೇಗಿಗಳ ಮಾರಕ ದಾಳಿಗೆ ತತ್ತರಿಸಿದ ಭಾರತ.. 46ಕ್ಕೆ ಆಲೌಟ್..!