Download Our App

Follow us

Home » ಅಪರಾಧ » ಡಿ ಗ್ಯಾಂಗ್​ನಿಂದ ರೇಣುಕಾಸ್ವಾಮಿ ಕೊಲೆ ಕೇಸ್​​ – FSL ಪರೀಕ್ಷೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ..!

ಡಿ ಗ್ಯಾಂಗ್​ನಿಂದ ರೇಣುಕಾಸ್ವಾಮಿ ಕೊಲೆ ಕೇಸ್​​ – FSL ಪರೀಕ್ಷೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್​​ಗೆ ಸಂಬಂಧಿಸಿದಂತೆ ನಟ ದರ್ಶನ್​ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಜುಲೈ 18ರವರೆಗೆ ಕೋರ್ಟ್​ ವಿಸ್ತರಣೆ ಮಾಡಿದ್ದು, ಡಿ-ಗ್ಯಾಂಗ್​ ಪರಪ್ಪನ ಅಗ್ರಹಾರದಲ್ಲಿ ಮತ್ತಷ್ಟು ದಿನ ದೂಡಬೇಕಿದೆ.

ಇದೀಗ ಈ ಪ್ರಕರಣದ ತನಿಖೆ ಚುರುಕುಗೊಂಡಿರುವ ಹೊತ್ತಲ್ಲೇ FSL ಪರೀಕ್ಷೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. FSL ತಜ್ಞರನ್ನ ಬಳಸಿ ಕ್ರೈಂ ಸೀನ್​​, ಶವ ಬಿಸಾಕಿದ ಜಾಗ, ಶವ ಸಾಗಾಟ ಮಾಡಿದ ವಾಹನ, ಸೆಕ್ಯೂರಿಟಿ ಗಾರ್ಡ್​ ಕೊಠಡಿ ಹಾಗೂ ಮೃತನ‌ ಬಟ್ಟೆಗಳು, ಹಲ್ಲೆ ಮಾಡಲು ಬಳಸಿದ ವಸ್ತುಗಳು, ಸಾಗಾಟ ಮಾಡಿದ ಕಾರ್,ಆರೋಪಿಗಳ ಬಟ್ಟೆಗಳ ಮೇಲಿನ‌ ಫಿಂಗರ್ ಪ್ರಿಂಟ್​​​ಗಳನ್ನು ಸಂಗ್ರಹಿಸಲಾಗಿತ್ತು.

ಆರೋಪಿಗಳ ಬಂಧನದ ಬಳಿಕ ಎಲ್ಲರ ಫಿಂಗರ್ ಪ್ರಿಂಟ್ FSLಗೆ ರವಾನೆ ಮಾಡಲಾಗಿತ್ತು. ಇದೀಗ FSL ಪರೀಕ್ಷೆಯಲ್ಲಿ ದರ್ಶನ್​, ಪವಿತ್ರಾ ಸೇರಿ ಹತ್ತಕ್ಕೂ ಹೆಚ್ಚು ಜನರ ಫಿಂಗರ್​ ಪ್ರಿಂಟ್​ ಮ್ಯಾಚ್ ಆಗುತ್ತಿದೆ ಎಂದು ಬಹಿರಂಗವಾಗಿದೆ. ಈ ಫಿಂಗರ್ ಪ್ರಿಂಟ್​​ಗಳೇ ಆರೋಪಿಗಳ ವಿರುದ್ದ ಪ್ರಮುಖ ಸಾಕ್ಷಿಯಾಗಲಿದೆ.

ಇದನ್ನೂ ಓದಿ : KSRTC ಕ್ರೆಡಿಟ್ ಸೊಸೈಟಿ ಎಲೆಕ್ಷನ್​​​ನಲ್ಲಿ ಗಲಾಟೆ – ಪರಸ್ಪರ ಕೈ ಕೈ ಮಿಲಾಯಿಸಿದ ಬಣದ ಸದಸ್ಯರು..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here