Download Our App

Follow us

Home » ರಾಜ್ಯ » ಕೊನೆಗೂ ಮಾಜಿ ಡಾನ್ ಮುತ್ತಪ್ಪ ರೈ ಆಸ್ತಿ ವಿವಾದ ಇತ್ಯರ್ಥ – ಎರಡನೇ ಪತ್ನಿಗೆ ಸಿಕ್ಕ ಆಸ್ತಿ ಎಷ್ಟು?

ಕೊನೆಗೂ ಮಾಜಿ ಡಾನ್ ಮುತ್ತಪ್ಪ ರೈ ಆಸ್ತಿ ವಿವಾದ ಇತ್ಯರ್ಥ – ಎರಡನೇ ಪತ್ನಿಗೆ ಸಿಕ್ಕ ಆಸ್ತಿ ಎಷ್ಟು?

ಬೆಂಗಳೂರು : ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಸಾವಿನ ಬಳಿಕ ಭಾರೀ ಸದ್ದು ಮಾಡಿದ್ದ ಆಸ್ತಿ ವಿವಾದಕ್ಕೆ ಕೊನೆಗೂ ಬ್ರೇಕ್​ ಬಿದ್ದಿದೆ. ಬೆಂಗಳೂರಿನ 19ನೇ ಸಿಟಿ ಸಿವಿಲ್ ಹಾಗೂ ಸೆಷನ್​ ಕೋರ್ಟ್​ನಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಆಸ್ತಿ ವಿವಾದ ಇತ್ಯರ್ಥಗೊಂಡಿದೆ. ಲೋಕ ಅದಾಲತ್ ಮೂಲಕ ಕೋರ್ಟ್​ನಲ್ಲಿ ಸಂಧಾನ ಮಾಡಿ ಆಸ್ತಿ ವಿವಾದವನ್ನು ಬಗೆಹರಿಸಲಾಗಿದೆ. ಮುತ್ತಪ್ಪ ರೈ ಆಸ್ತಿಯಲ್ಲಿ ಪಾಲು ಕೇಳಿ ರೈ ಅವರ ಎರಡನೇ ಪತ್ನಿ ಅನುರಾಧಾ ರೈ ಕೋರ್ಟ್ ಮೆಟ್ಟಿಲೇರಿದ್ದರು. ಈಗ ಆ ವಿವಾದ ಇತ್ಯರ್ಥಗೊಂಡಿದೆ.

ಮುತ್ತಪ್ಪ ರೈ, ತಾವು ಮೃತಪಡುವ ಒಂದು ವರ್ಷದ ಹಿಂದೆ ಅಂದ್ರೆ 2019ರಲ್ಲಿ ಆಸ್ತಿಗೆ ಸಂಬಂಧಿಸಿದಂತೆ ವಿಲ್ ಮಾಡಿಟ್ಟಿದ್ದರು. ವಕೀಲ ನಾರಾಯಣಸ್ವಾಮಿಯವರನ್ನು ವಿಲ್ ಎಕ್ಸಿಕ್ಯೂಟರ್ ಆಗಿ ನೇಮಿಸಿ, ಅಡ್ವೋಕೇಟ್​ ಗೀತಾರಾಜ್ ಎಂಬುವವರ ಮೂಲಕ ಆಸ್ತಿಗೆ ಸಂಬಂಧಿಸಿದಂತೆ ವಿಲ್ ಬರೆಸಿದ್ರು. ಸಾವಿರ ಕೋಟಿಗೂ ಅಧಿಕ ಮೌಲ್ಯದ ಆಸ್ತಿಗೆ ಸುಮಾರು 41 ಪುಟಗಳ ವಿಲ್ ಬರೆಸಿದ್ದ ಮುತ್ತಪ್ಪ ರೈ, ಪುತ್ರರಾದ ರಾಕಿ ರೈ, ರಿಕ್ಕಿ ರೈ, ಸಹೋದರನ ಪುತ್ರ ಅಶ್ವಿನ್ ರೈ, ಎರಡನೇ ಪತ್ನಿ ಅನುರಾಧ ರೈ ಸೇರಿ ಮನೆಗೆಲಸದವರ ಬಗ್ಗೆಯೂ ಉಲ್ಲೇಖ ಮಾಡಿದ್ದರು.

2020ರಲ್ಲಿ ಮುತ್ತಪ್ಪ ರೈ ನಿಧನರಾದ ಬಳಿಕ ಕೋರ್ಟ್​ನಲ್ಲಿ ಆಸ್ತಿಯಲ್ಲಿ ಪಾಲು ಕೇಳಿ ರೈ ಅವರ ಎರಡನೇ ಪತ್ನಿ ಅನುರಾಧ ದಾವೆ ಹೂಡಿದ್ದರು. ಮುತ್ತಪ್ಪ ರೈ ಪುತ್ರರಾದ ರಾಕಿ ರೈ, ರಿಕ್ಕಿ ರೈರನ್ನು ಪ್ರತಿವಾದಿಗಳಾಗಿ ಮಾಡಿ ದಾವೆ ಹೂಡಿದ್ದರು. ಸದ್ಯ ಕಾಂಪ್ರಮೈಸ್ ಪಿಟಿಷನ್ ಮೂಲಕ ಆಸ್ತಿ ವಿವಾದ ಇತ್ಯರ್ಥಗೊಂಡಿದೆ. ಸುಮಾರು ನೂರು ಕೂಟಿ ರೂಪಾಯಿ ಮೌಲ್ಯದ ಆಸ್ತಿಯನ್ನ ಮುತ್ತಪ್ಪ ರೈ ಎರಡನೇ ಪತ್ನಿಗೆ ನೀಡಲಾಗಿದೆ.

ಕೋರ್ಟ್​ ಸಂಧಾನದ ಮೂಲಕ ಅನುರಾಧ ರೈ ಅವರಿಗೆ ಮುತ್ತಪ್ಪ ರೈ ಮಕ್ಕಳಾದ ರಿಕ್ಕಿ ರೈ, ರಾಕಿ ರೈ ನೀಡಿರುವ ಆಸ್ತಿ ವಿವಿರ ಹೀಗಿದೆ.

  • ಏಳು ಕೋಟಿ ಹಣ
  • ಮಂಡ್ಯದ ಪಾಂಡವಪುರದ ಬಳಿ 22 ಎಕರೆ ಜಮೀನು
  • ಮೈಸೂರಿನಲ್ಲಿ 4800 ಚದರಡಿ ನಿವೇಶನ ಹಾಗೂ ನಿವೇಶನದಲ್ಲಿನ ಮನೆ
  • ನಂದಿಬೆಟ್ಟ ಬಳಿಯ ಕೆಂಪತಿಮ್ಮನಹಳ್ಳಿಯಲ್ಲಿ ಐದೂವರೆ ಎಕರೆ ಜಮೀನು

ಇದನ್ನೂ ಓದಿ : ಪ್ಲೀಸ್‌ ಒಂದು ಚಾನ್ಸ್​ ಕೊಡಿ ಬಿಗ್​ಬಾಸ್… ಜಗದೀಶ್, ರಂಜಿತ್ ಹೊರಹೋಗ್ತಿದ್ದಂತೆ ಕಣ್ಣೀರಿಟ್ಟ ಸ್ಪರ್ಧಿಗಳು..!

Leave a Comment

DG Ad

RELATED LATEST NEWS

Top Headlines

ನಟ ದರ್ಶನ್​ಗೆ ನಾಳೆ ನಿರ್ಣಾಯಕ ದಿನ – ಏನಾಗಲಿದೆ ಬೇಲ್ ಭವಿಷ್ಯ?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿಯಾಗಿರುವ ನಟ ದರ್ಶನ್​​ಗೆ ನಾಳೆ ನಿರ್ಣಾಯಕ ದಿನವಾಗಿದೆ. ಮಧ್ಯಂತರ ಜಾಮೀನು ಪಡೆದು ಜೈಲಿಂದ ಹೊರಗೆ ಬಂದಿರುವ ನಟ ದರ್ಶನ್ ಸದ್ಯ

Live Cricket

Add Your Heading Text Here