ಬೆಂಗಳೂರು : ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲಲೇಬೇಕೆಂದು ಹಟಕ್ಕೆ ಬಿದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಎರಡು ದಿನ ಮತ್ತೆ ಈ ಎರಡು ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಇಂದು ಚಾಮರಾಜನಗರ ಕ್ಷೇತ್ರ ವ್ಯಾಪ್ತಿಯಲ್ಲಿ ‘ಪ್ರಜಾಧ್ವನಿ– 2’ ಸಮಾವೇಶಗಳಲ್ಲಿ ಭಾಗವಹಿಸಲಿರುವ ಸಿದ್ದರಾಮಯ್ಯ, ನಾಳೆ ಮೈಸೂರು ನಗರ, ಹುಣಸೂರು, ಪಿರಿಯಾಪಟ್ಟಣದಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಇಂದು ಬೆಳಗ್ಗೆ 10.40ಕ್ಕೆ ಕೊಳ್ಳೆಗಾಲ ಟೌನ್‌ನಲ್ಲಿ ಪ್ರಜಾಧ್ವನಿ-2 ಪ್ರಚಾರ ಸಭೆ ನಡೆಸಲಿದ್ದು, ಸಿಎಂ ಸಿದ್ದರಾಮಯ್ಯ ಮಧ್ಯಾಹ್ನದ ನಂತರ ನಂಜನಗೂಡು ಟೌನ್‌ನಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸಲಿದ್ದಾರೆ. ಸಂಜೆ ಹೆಚ್.ಡಿ. ಕೋಟೆ ಟೌನ್‌ನಲ್ಲಿ ಸಿದ್ದರಾಮಯ್ಯ ರೋಡ್ ಶೋ ಇರಲಿದ್ದು, ರಾತ್ರಿ ಮೈಸೂರಿನಲ್ಲಿ ಸಿಎಂ ವಾಸ್ತವ್ಯ ಹೂಡಲಿದ್ದಾರೆ.
ಮೈಸೂರು, ಚಾಮರಾಜನಗರ ಗೆಲ್ಲಲು ಸಿದ್ದು ವಿಶ್ವಪ್ರಯತ್ನ ಮಾಡುತ್ತಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿಗಳನ್ನ ಗೆಲ್ಲಿಸಲು ಸತತ ಕಸರತ್ತು ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಎರಡು ಜಿಲ್ಲೆಯಲ್ಲೂ ಪ್ರಜಾಧ್ವನಿ ಯಾತ್ರೆ ಮೂಲಕ ರೋಡ್ ಶೋ ಮಾಡಲಿದ್ದಾರೆ. ನಾಳೆ ಕೃಷ್ಣರಾಜ ಕ್ಷೇತ್ರದಲ್ಲಿ ಪ್ರಜಾಧ್ವನಿ ಯಾತ್ರೆಯಲ್ಲಿ ಸಿಎಂ ಭಾಗಿಯಾಗಿ, ಮಧ್ಯಾಹ್ನ ಹುಣಸೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಸಂಜೆ ಪಿರಿಯಾಪಟ್ಟಣ ಟೌನ್‌ನಲ್ಲಿ ಪ್ರಚಾರ ಸಭೆ ಮಾಡಿ ನಾಳೆ ಸಂಜೆಯೇ ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಇದನ್ನೂ ಓದಿ : ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪಿಂಗ್ ಮಾಡಿಸಿದ್ದು ಕುಮಾರಸ್ವಾಮಿ – ಚಲುವರಾಯಸ್ವಾಮಿ ಗಂಭೀರ ಆರೋಪ..!