Download Our App

Follow us

Home » ಜಿಲ್ಲೆ » ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಸಕಲ ತಯಾರಿ – ಇಂದಿನಿಂದ ಗಜಪಡೆಗಳ ತಾಲೀಮು ಆರಂಭ..!

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಸಕಲ ತಯಾರಿ – ಇಂದಿನಿಂದ ಗಜಪಡೆಗಳ ತಾಲೀಮು ಆರಂಭ..!

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆ ಇಂದಿನಿಂದ ದಸರಾ ಗಜಪಡೆಗಳ ತಾಲೀಮು ಆರಂಭಿಸಲಾಗಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗಳು ರಾಜಬೀದಿಗಳಲ್ಲಿ ಗಜಗಾಂಭಿರ್ಯದಿಂದ ಹೆಜ್ಜೆ ಹಾಕಿದೆ.

ಅರಮನೆಯಿಂದ ಬನ್ನಿ ಮಂಟಪದವರೆಗೆ ದಸರಾ ಗಜಪಡೆಗಳಿಗೆ ತಾಲೀಮು ಆರಂಭಿಸಿದ್ದು, ಇಂದಿನಿಂದ ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ವೇಳೆ ದಸರಾ ಆನೆಗಳು ವಾಕಿಂಗ್ ಮಾಡಲಿವೆ. ಮೊದಲ ಹಂತದಲ್ಲಿ ಕಾಡಿನಿಂದ ಮೈಸೂರು ಅರಮನೆಗೆ 9 ಆನೆಗಳು ಆಗಮಿಸಿದೆ.

ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ದಸರಾ ಗಜಪಡೆಗಳು ರಾಜಬೀದಿಗಳಲ್ಲಿ ಗಜಗಾಂಭಿರ್ಯದಿಂದ ಹೆಜ್ಜೆ ಹಾಕಿ ತರಬೇತಿ ಮಾಡಲಾರಂಭಿಸಿದೆ. ಅರಮನೆಯಿಂದ ಸಯ್ಯಾಜೀರಾವ್ ರಸ್ತೆ, ಆಯುವೇರ್ದಿಕ್ ವೃತ್ತದ ಮೂಲಕ ಜಂಬೂ ಬಜಾರ್ ತಲುಪಿ ಹೈವೇ ಸರ್ಕಲ್ ಮೂಲಕ ದಸರಾ ಗಜಪಡೆಗಳು ಬನ್ನಿ ಮಂಟಪ ತಲುಪಲಿದೆ.

ಅರಮನೆಯಿಂದ ಬನ್ನಿಮಂಟಪದವರೆಗೆ 5 ಕಿ.ಮೀ ತಾಲೀಮು ನಡೆಯಲಿದ್ದು, ಜಂಬೂ ಸವಾರಿಯ ದಿನ ಯಾವುದೇ ತೊಂದರೆಯಾಗದಿರಲಿ ಎಂದು ತಾಲೀಮು ನಡೆಸಲಾಗುತ್ತಿದೆ. ಇನ್ನು ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ರಾಜ್ಯದ್ಯಂತ ಎಲ್ಲರೂ ಕಾತುರದಿಂದ ಕಾಯುತ್ತಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಕೂಡ ಮುತುವರ್ಜಿ ವಹಿಸಿ ಸಕಲ ತಯಾರಿ ನಡೆಸುತ್ತಿವೆ.

ಇದನ್ನೂ ಓದಿ : ಜಗದೊಡೆಯ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಜಲಕ್ಷಾಮ?

 

 

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here