Download Our App

Follow us

Home » ಜಿಲ್ಲೆ » ಮೈಸೂರು : ಬಿಯರ್ ತಯಾರಿಕ ಘಟಕದ ಮೇಲೆ ಅಬಕಾರಿ ಅಧಿಕಾರಿಗಳಿಂದ ದಾಳಿ – 98.52 ಕೋಟಿ ಮೌಲ್ಯದ ಬಿಯರ್, ಕಚ್ಚಾ ವಸ್ತು ವಶಕ್ಕೆ..!

ಮೈಸೂರು : ಬಿಯರ್ ತಯಾರಿಕ ಘಟಕದ ಮೇಲೆ ಅಬಕಾರಿ ಅಧಿಕಾರಿಗಳಿಂದ ದಾಳಿ – 98.52 ಕೋಟಿ ಮೌಲ್ಯದ ಬಿಯರ್, ಕಚ್ಚಾ ವಸ್ತು ವಶಕ್ಕೆ..!

ಮೈಸೂರು : ಜಿಲ್ಲೆಯಲ್ಲಿರುವ ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ ಘಟಕದ ಮೇಲೆ ನಿನ್ನೆ ಅಬಕಾರಿ ಜಂಟಿ ಆಯುಕ್ತರು ದಾಳಿ ನಡೆಸಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮೈಸೂರು ಜಿಲ್ಲೆಯ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ‌ ಬಿಯರ್ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಲಾಗಿದ್ದು, ದೂರವಾಣಿ ಮೂಲಕ ಬಂದ ಮಾಹಿತಿ ಆಧರಿಸಿ ಅಧಿಕಾರಿಗಳು ರೇಡ್ ಮಾಡಿದ್ದಾರೆ.

ಬಿಯರ್ ತಯಾರಿಕಾ ಘಟದಲ್ಲಿ ದಾಳಿ ವೇಳೆ ಸರ್ಕಾರಕ್ಕೆ ತೋರಿಸಿರುವ ದಾಸ್ತಾನು ಲೆಕ್ಕಕ್ಕಿಂತ ಅಧಿಕ ಸಂಗ್ರಹ ಪತ್ತೆಯಾಗಿದ್ದು, ಈ ಹಿನ್ನಲೆ ಅಬಕಾರಿ ಜಂಟಿ ಆಯುಕ್ತರ ತಂಡ 98 ಕೋಟಿ 52 ಲಕ್ಷ ರೂ ಮೊತ್ತದ ಬಿಯರ್, ಕಚ್ಚಾ ವಸ್ತುವನ್ನು ಜಪ್ತಿ ಮಾಡಿದೆ. ಘಟಕದಲ್ಲಿ ನಿಗದಿಗಿಂತ ಹೆಚ್ಚುವರಿ ಬಿಯರ್ ತಯಾರಿಸಿ ಕೇರಳಕ್ಕೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಇನ್ನು, 7000 ಸಾವಿರ ವಿವಿಧ ಬ್ರಾಂಡಿನ ಪೆಟ್ಟಿಗೆಗಳಲ್ಲಿದ್ದ ಬಿಯರ್ ಬಾಟಲಿಗಳು ರೇಡ್ ವೇಳೆ ಪತ್ತೆಯಾಗಿದೆ. ಯುಟಿ ಟ್ಯಾಂಕ್, ಸೈಲೋಸ್ ಟ್ಯಾಂಕ್ ಗಳಲ್ಲಿರುವ ಕಚ್ಚಾ ವಸ್ತು ಸಮೇತ ಅಧಿಕಾರಿಗಳು ಜಪ್ತಿ ಮಾಡಿದ್ದು, ಈ ಘಟನೆ ಸಂಬಂಧ 17 ಮಂದಿ ವಿರದ್ಧ ದೂರು ದಾಖಲಾಗಿದೆ. ಸದ್ಯ ಅಬಕಾರಿ ಪೊಲೀಸರು ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಇಂದು ಮಾಜಿ ಸಿಎಂ ಹೆಚ್.​ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here