Download Our App

Follow us

Home » ಜಿಲ್ಲೆ » ದಸರಾ ಸಿದ್ಧತೆ ಹೊತ್ತಲ್ಲೇ ಮೈಸೂರಿನಲ್ಲಿ ಹೆಚ್ಚಿದ ಆತಂಕ : ತಿ.ನರಸೀಪುರದಲ್ಲಿ ರಾಶಿ-ರಾಶಿ ಸ್ಫೋಟಕಗಳು ಪತ್ತೆ..!

ದಸರಾ ಸಿದ್ಧತೆ ಹೊತ್ತಲ್ಲೇ ಮೈಸೂರಿನಲ್ಲಿ ಹೆಚ್ಚಿದ ಆತಂಕ : ತಿ.ನರಸೀಪುರದಲ್ಲಿ ರಾಶಿ-ರಾಶಿ ಸ್ಫೋಟಕಗಳು ಪತ್ತೆ..!

ಮೈಸೂರು : ತಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಫ್ರೆಂಡ್ಸ್ ಹೋಟೆಲ್ ಪಕ್ಕದಲ್ಲಿ ಭಾರಿ ಸ್ಫೋಟಕಗಳು ಪತ್ತೆಯಾಗಿವೆ. ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್​ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ.

ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್​ ಸಿಬ್ಬಂದಿ ಗಾಬರಿಯಿಂದ ಕೂಡಲೇ ಸ್ಫೋಟಕ ಇದ್ದ ಪ್ಲಾಸ್ಟಿಕ್​ ಕವರ್​ನ್ನು ಪಕ್ಕದಲ್ಲಿರುವ ಮರಕ್ಕೆ ನೇತು ಹಾಕಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ, ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕ ವಸ್ತುಗಳು ಮತ್ತು ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ.

ಕಲ್ಲು ಗಣಿಗಾರಿಕೆಗೆ ಮತ್ತು ಪ್ರಾಣಿಗಳ ಬೇಟೆಗೆ ಸ್ಫೋಟಕಗಳನ್ನು ಬಳಸಲು ತೆಗೆದುಕೊಂಡು ಹೋಗುತ್ತಿದ್ದರು ಎಂದು ಶಂಕೆ ವ್ಯಕ್ತವಾಗಿದೆ. ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಸ್ಪೋಟಕ ವಸ್ತುಗಳನ್ನು ವಶಕ್ಕೆ ಪಡೆದು, ಹೋಟೆಲ್​ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕಿದ್ದಾರೆ.

ಇನ್ನು, ಕಳೆದ ವರ್ಷ ಮೈಸೂರು ದಸರಾ ಮೇಲೆ ಉಗ್ರರ ಕರಿ ನೆರಳು ಬಿದ್ದಿತ್ತು ಎಂಬ ಮಾಹಿತಿ ಗುಪ್ತಚರ ಇಲಾಖೆಗೆ ರವಾನೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಮಾಡಲಾಗಿತ್ತು. ಶಂಕಿತರನ್ನು ವಶಕ್ಕೆ ಪಡೆಯಲಾಗಿತ್ತು.

ಇದನ್ನೂ ಓದಿ : ರಾಜ್ಯದಲ್ಲಿ ಡೆಂಘೀಗೆ ಮತ್ತೊಂದು ಬಲಿ – 7 ವರ್ಷದ ಬಾಲಕ ಸಾವು..

Leave a Comment

DG Ad

RELATED LATEST NEWS

Top Headlines

ಮಂಗಳೂರಲ್ಲಿ ಕಿಡಿಗೇಡಿಗಳಿಂದ ಪ್ರಾರ್ಥನಾ ಸ್ಥಳದ ಮೇಲೆ ಕಲ್ಲೆಸೆತ – ಕರಾವಳಿಯ ಅಲ್ಲಲ್ಲಿ ಪರಿಸ್ಥಿತಿ ಉದ್ವಿಗ್ನ..!

ಮಂಗಳೂರು : ಮಂಗಳೂರಿನ ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ನಿನ್ನೆ ರಾತ್ರಿ ಪ್ರಾರ್ಥನಾ ಸ್ಥಳದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ ಘಟನೆ ನಡೆದಿದೆ. ಕಾಟಿಪಳ್ಳ 3ನೇ

Live Cricket

Add Your Heading Text Here