ಮೈಸೂರು : ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ, ಸಿಸಿಟಿವಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಮುತ್ತುರಾಯನ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.
ಕಿಡಿಗೇಡಿಗಳು ಮನು ಎಂಬುವವರಿಗೆ ಸೇರಿದ ಒಂದು ಕಾರು, ಒಂದು ಬೈಕ್ ಹಾಗೂ ಒಂದು ಸೈಕಲ್ ನಾಶ ಪಡಿಸಿದ್ದು ಅಲ್ಲದೇ ಮನೆ ಮುಂದೆ ಅಳವಡಿಸಿದ್ದ ಸಿಸಿಟಿವಿಗೂ ಬೆಂಕಿ ಹಚ್ಚಿದ್ದಾರೆ. ಕೇವಲ 9 ದಿನಗಳ ಹಿಂದೆ ಹೋಂಡಾ ಆಕ್ಟಿವಾ ಖರೀದಿಸಿದ್ದರು.
ಇನ್ನು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೋಡಿ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ - ಇನ್ಮುಂದೆ 60 ದಿನ ಮೊದಲು ಟಿಕೆಟ್ ಬುಕಿಂಗ್ಗೆ ಅವಕಾಶ..!
Post Views: 153