ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ದೆಹಲಿ ಮಹಿಳೆ ಉಳಿದುಕೊಂಡಿದ್ದ ಮನೆಯಲ್ಲಿ ಸ್ಪೋಟ ಸಂಭವಿಸಿದೆ. ಸ್ಫೋಟದಲ್ಲಿ 7 ಮಂದಿಗೆ ಗಂಭೀರ ಗಾಯಗೊಂಡಿರುವ ಘಟನೆ ಯಲಹಂಕದ LBS ಲೇಔಟ್ನಲ್ಲಿ ನಡೆದಿದೆ.
ನಿಗೂಢ ಸ್ಫೋಟಕ್ಕೆ ಐದು ಮನೆಗಳು ಡ್ಯಾಮೇಜ್ ಆಗಿದೆ. 7 ಮಂದಿಗೆ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳು ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಸ್ಫೋಟದ ಬಗ್ಗೆ ತನಿಖೆ ಮಾಡುತ್ತಿದ್ದು, ಸ್ಫೋಟ ಹೇಗೆ ಸಂಭವಿಸಿದೆ ಅನ್ನೋ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಸದ್ಯದಲ್ಲೇ ಹೆಚ್.ಡಿ. ಕುಮಾರಸ್ವಾಮಿಗೆ ಸಿಗಲಿದೆ ಕೇಂದ್ರ ಮಂತ್ರಿ ಸ್ಥಾನ..
Post Views: 273