Download Our App

Follow us

Home » ಅಪರಾಧ » ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ – ಕೊಲೆ ಮಾಡಿ ಆಗುಂಬೆ ಅರಣ್ಯದಲ್ಲಿ ಮೃತದೇಹ ಎಸೆದ ಪ್ರಿಯಕರ..!

ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ – ಕೊಲೆ ಮಾಡಿ ಆಗುಂಬೆ ಅರಣ್ಯದಲ್ಲಿ ಮೃತದೇಹ ಎಸೆದ ಪ್ರಿಯಕರ..!

ಶಿವಮೊಗ್ಗ : ಶಿವಮೊಗ್ಗದಲ್ಲಿ ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ಜೂನ್ 30ರಂದು ಕಾಣೆಯಾಗಿದ್ದ ಪೂಜಾ(24) ಮೃತದೇಹ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.

ಇನ್ನು ಈ ಸಂಬಂಧ ಪೊಲೀಸರು ತನಿಖೆ ನಡೆಸಿ ಪೂಜಾಳ ಪ್ರಿಯಕರ ಮಣಿ ಎಂಬತನ್ನು ವಿಚಾರಣೆ ನಡೆಸಿದಾಗ ತಾನೇ ಕೊಲೆ ಮಾಡಿರುವುದಾಗಿ ಮಣಿ ಒಪ್ಪಿಕೊಂಡಿದ್ದಾನೆ. ಕತ್ತು ಹಿಸುಕಿ ಕೊಂದು ಬಳಿಕ ಪಿಕ್​ಅಪ್​​ ವಾಹನದಲ್ಲಿ ಶವ ಸಾಗಾಟ ಮಾಡಿ ನಾಲೂರು ಬಳಿ ಹೊಂಡದಲ್ಲಿ ಬಿಸಾಡಿದ್ದಾಗಿ ಪೊಲೀಸರ ವಿಚಾರಣೆ ವೇಳೆ ಮಣಿ ತಪ್ಪೊಪ್ಪಿಕೊಂಡಿದ್ದಾನೆ.

ಕಳೆದ ಜೂ.30ರಂದು ಮನೆಯಿಂದ ಕೆಲಸಕ್ಕೆ ಹೋಗಿದ್ದ ಪೂಜಾ ಏಕಾಏಕಿ ಕಾಣೆಯಾಗಿದ್ದಳು. ಮನೆಗೆ ವಾಪಸ್ ಬರದ ಹಿನ್ನೆಲೆಯಲ್ಲಿ ಪೂಜಾ ಪೋಷಕರು ಆತಂಕಗೊಂಡು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಬಳಿಕ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪೂಜಾ ತಂದೆ ಕುಶಾಲ್ ಮಿಸ್ಸಿಂಗ್‌ ಕಂಪ್ಲೇಟ್‌ ಕೊಟ್ಟಿದ್ದರು. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆಗಿಳಿದಾಗ ಪೂಜಾಳ ಶವವು ಪತ್ತೆಯಾಗಿತ್ತು. ಬಳಿಕ ಆಕೆಯ ಫೋನ್‌ ಕಾಲ್‌ ಲಿಸ್ಟ್‌ ತೆಗೆದು ಮಿಸ್ಸಿಂಗ್‌ ಆದ ಕೊನೆ ದಿನ ಯಾರೆಲ್ಲ ಕರೆ ಮಾಡಿದ್ದರು ಅವರನ್ನೆಲ್ಲ ಪೊಲೀಸರು ವಿಚಾರಣೆ ನಡೆಸಿದ್ದರು.

ಈ ವೇಳೆ ಪ್ರಿಯಕರ ಮಣಿಯದ್ದೇ ಕೊನೆಯ ಫೋನ್‌ ಕಾಲ್ ಬಂದಿರುವುದು ಗೊತ್ತಾಗಿದೆ. ಬಳಿಕ ಆತನನ್ನು ಕೆರೆಸಿ ಪೊಲೀಸರು ತಮ್ಮದೇ ಸ್ಟೈಲ್‌ನಲ್ಲಿ ವಿಚಾರಣೆ ನಡೆಸಿದ್ದಾರೆ. ಆ ವೇಳೆ ಪೂಜಾಳನ್ನು ಕೊಂದಿದ್ದಾಗಿ ಮಣಿ ಒಪ್ಪಿಕೊಂಡಿದ್ದಾನೆ. ಕೊಲೆ ಮಾಡಿ ಬಳಿಕ ಆಗುಂಬೆ ಅರಣ್ಯ ಪ್ರದೇಶದಲ್ಲಿ ಬಿಸಾಡಿ ಹೋಗಿದ್ದಾನೆ ಎನ್ನುವ ಅಂಶ ಬಯಲಾಗಿದೆ.

ಪೂಜಾ 5 ವರ್ಷದ ಹಿಂದೆ ಮದ್ವೆಯಾಗಿ, ನಂತರ ಪತಿಯಿಂದ ದೂರವಾಗಿ ತವರು ಮನೆಯಲ್ಲಿ ವಾಸವಿದ್ದಳು. ಪತಿಯಿಂದ ದೂರಾದ ಬಳಿಕ ಮಣಿ ಜೊತೆ ಪೂಜಾ ಸುತ್ತಾಟ ನಡೆಸುತ್ತಿದ್ದಳು. ಮಣಿ ಅಲ್ದೇ ಬೇರೆಯವರ ಜೊತೆಯೂ ಪೂಜಾ ಚಾಟಿಂಗ್​ ಮಾಡ್ತಿದ್ದಳು ಎನ್ನಲಾಗಿದೆ. ಇದ್ರಿಂದ ರೊಚ್ಚಿಗೆದ್ದ ಮಣಿ ಪೂಜಾಳ ಕೊಲೆ ಮಾಡಿದ್ದಾನೆ. ಸದ್ಯ ಆಗುಂಬೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿಸಲಾಗಿದೆ.

ಇದನ್ನೂ ಓದಿ : ಐತಿಹಾಸಿಕ ಪುರಿ ಜಗನ್ನಾಥನ ರಥಯಾತ್ರೆ ವೇಳೆ ಕಾಲ್ತುಳಿತ – ಓರ್ವ ಸಾವು, 300ಕ್ಕೂ ಹೆಚ್ಚು ಭಕ್ತಾಧಿಗಳಿಗೆ ಗಾಯ..!

 

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here