ನಾಗಮಂಗಲ : ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಸಂಭವಿಸಿದ್ದ ಗಲಭೆಯಿಂದ ಉಂಟಾಗಿದ್ದ ಉದ್ವಿಗ್ನ ವಾತಾವರಣ ತಿಳಿಗೊಂಡಿದೆ. ಘಟನೆ ನಡೆದ ದಿನದಿಂದಲೂ ಬಂದ್ ಆಗಿದ್ದ ಅಂಗಡಿಗಳು ನಿನ್ನೆ ಶೇಕಡಾ.50ರಷ್ಟು ತೆರೆದಿವೆ. ಸದ್ಯ ಬೂದಿ ಮುಚ್ಚಿದ ಕೆಂಡದಂತಿದ್ದ ನಾಗಮಂಗಲ ಸಹಜ ಸ್ಥಿತಿಯತ್ತ ಮರಳಿದೆ.
ಮಂಡ್ಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ನಾಗಮಂಗಲದಲ್ಲಿ ಶಾಂತಿ ಸಭೆ ನಡೆಯಲಿದೆ. ಶಾಂತಿ ಸಭೆ ಬಳಿಕ ಸಚಿವ ಚಲುವರಾಯಸ್ವಾಮಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ನಾಗಮಂಗಲ ಗಲಭೆ ಪ್ರಕರಣ ಸಂಬಂಧ ಈವರೆಗೂ 52 ಮಂದಿಯನ್ನು ಬಂಧಿಸಲಾಗಿದೆ. ನಾಗಮಂಗಲದ ನೆಮ್ಮದಿ ಕೆಡಿಸಿದ 150 ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬಂಧಿತ 52 ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಹಿರಿಯ ಸಿವಿಲ್ ನ್ಯಾಯಾಧೀಶರು ಆದೇಶಿಸಿದ್ದಾರೆ.
ಇದನ್ನೂ ಓದಿ : ಇಂದು JDS ಕಾರ್ಯಕರ್ತರ ಜೊತೆ ಕೇಂದ್ರ ಸಚಿವ HDK ಮೀಟಿಂಗ್..!
Post Views: 185