ವಂದೇ ಮೆಟ್ರೋಗೆ ‘ನಮೋ ಭಾರತ್ ರಾಪಿಡ್ ರೈಲ್’ ಎಂದು ಮರುನಾಮಕರಣ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೊದಲ ರೈಲಿಗೆ ಚಾಲನೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನ್ಮದಿನದ ಹಿಂದಿನ ದಿನವಾದ ಇಂದು ಗುಜರಾತ್‌ನಲ್ಲಿ ದೇಶದ ಮೊಟ್ಟ ಮೊದಲ ‘ನಮೋ ಭಾರತ್ ರ‍್ಯಾಪಿಡ್ ರೈಲು’ ಸೇವೆಗೆ ಚಾಲನೆ ನೀಡಿದ್ದಾರೆ.
ಈ ರೈಲು ಗುಜರಾತ್‌ನ ಕಚ್ ಜಿಲ್ಲೆಯಲ್ಲಿರುವ ಭುಜ್‌ನಿಂದ ಅಹಮದಾಬಾದ್ ನಗರಕ್ಕೆ ಸಂಪರ್ಕವನ್ನು ಕಲ್ಪಿಸುತ್ತದೆ. ಇದು ಕೇವಲ 6 ಗಂಟೆಗಳಲ್ಲಿ 360 ಕಿಲೋ ಮೀಟರ್ ದೂರವನ್ನು ಕ್ರಮಿಸುತ್ತದೆ. ಇದು ಗಂಟೆಗೆ ಗರಿಷ್ಠ 110 ಕಿಲೋ ಮೀಟರ್ ವೇಗದಲ್ಲಿ ಚಲಿಸುವ ಸಾಮರ್ಥ್ಯವನ್ನು ಹೊಂದಿದ್ದು, ಪ್ರಮುಖ ನಿಲ್ದಾಣಗಳಾದ ಅಂಜಾರ್, ಗಾಂಧಿಧಾಮ್, ಭಚೌ, ಸಮಖಿಯಾಲಿ, ಹಲ್ವಾಡ್, ಧ್ರಂಗಾಧ್ರ, ವಿರಾಮಗಮ್, ಚಂದ್ಲೋಡಿಯಾ, ಸಬರಮತಿ ಮತ್ತು ಅಂತಿಮವಾಗಿ ಅಹಮದಾಬಾದ್‌ನ ಕಲುಪುರ್ನಲ್ಲಿ ನಿಲುಗಡೆಯಾಗಲಿದೆ.
ಅಹಮದಾಬಾದ್ -ಭುಜ್ ಸಂಚರಿಸುವ ಈ ರೈಲು ಒಟ್ಟು 9 ನಿಲ್ದಾಣಗಳಲ್ಲಿ ನಿಲ್ಲುತ್ತದೆ. ಈ ರೈಲು 1,150 ಆಸನಗಳನ್ನು ಹೊಂದಿರುವುದಲ್ಲದೇ 2,058 ನಿಂತು ಪ್ರಯಾಣಿಸಬಹುದಾಗಿದೆ. ಕುಳಿತುಕೊಳ್ಳಲು ಮೃದು ಸೋಫಾಗಳನ್ನ ಅಳವಡಿಸಲಾಗಿದೆ. ಸಾರ್ವಜನಿಕರಿಗೆ ಅಹ್ಮದಾಬಾದ್‌ನಿಂದ ಸೆಪ್ಟೆಂಬರ್ 17 ರಂದು ನಿಯಮಿತ ಸೇವೆ ಪ್ರಾರಂಭವಾಗಲಿದೆ.
ಇದನ್ನೂ ಓದಿ : ವಿಜಯನಗರ ಜಿಲ್ಲೆಯಲ್ಲಿ ಕತ್ತೆ ಖರೀದಿ ಭರಾಟೆ – ಲಕ್ಷ, ಲಕ್ಷ ಕೊಟ್ಟು ಖರೀದಿಗೆ ಮುಗಿಬಿದ್ದ ಜನ..!