ತಿರುಪತಿ ಲಡ್ಡು ವಿವಾದ ಭುಗಿಲೆದ್ದ ಬೆನ್ನಲ್ಲೇ ಕರ್ನಾಟಕದ ಧಾರ್ಮಿಕ ದತ್ತಿ ಇಲಾಖೆಯು ದೇವಸ್ಥಾನಗಳಲ್ಲಿ ತಯಾರಿಸುವ ಎಲ್ಲ ಪ್ರಸಾದಗಳಲ್ಲೂ ಕಡ್ಡಾಯವಾಗಿ ನಂದಿನಿ ತಪ್ಪುವನ್ನೇ ಬಳಸುವಂತೆ ಆದೇಶ ನೀಡಿದೆ.
ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚನೆಯ ಮೇರೆಗೆ ಧಾರ್ಮಿಕ ದತ್ತಿ ಇಲಾಖೆ ಈ ಸುತ್ತೋಲೆ ಹೊರಡಿಸಿದೆ. ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದೆ. ಜೊತೆಗೆ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆಯೂ ಸೂಚನೆ ನೀಡಿದೆ.
ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಅನ್ನೋದನ್ನು ಟಿಟಿಡಿ ಒಪ್ಪಿಕೊಂಡಿದೆ. ಲಡ್ಡುಗೆ ಬಳಸಲಾಗಿರುವ ಕಚ್ಚಾವಸ್ತುಗಳ ಲ್ಯಾಬ್ ವರದಿ ಬಯಲಾಗುತ್ತಿದ್ದಂತೆ ಸುದ್ದಿಗೋಷ್ಠಿ ನಡೆಸಿದ್ದ ಟಿಟಿಡಿ ಎಕ್ಸಿಕ್ಯೂಟಿವ್ ಅಧಿಕಾರಿ ಶ್ಯಾಮಲಾ ರಾವ್, ಲಡ್ಡು ತಯಾರಿಕೆಗೆ ಕಲಬೆರಕೆ ತುಪ್ಪ ಬಳಸಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ.
ಅದೇ ರೀತಿಯಾಗಿ ತಿರುಪತಿಯಲ್ಲಿ ತಯಾರಾಗುವ ಲಡ್ಡುವಿಗೆ ಬಳಸುವ ತುಪ್ಪದ ಮಾದರಿ ಪರೀಕ್ಷೆ ನಡೆಸಲಾಗಿದೆ. ಆ ತುಪ್ಪದಲ್ಲಿ ಮೀನಿನ ಎಣ್ಣೆ, ಪಾಮ್ ಆಯಿಲ್ ಪತ್ತೆಯಾಗಿದೆ. ಇದೀಗ ತಿರುಪತಿ ತಿಮ್ಮಪ್ಪನ ಲಡ್ಡು ತಯಾರಿಕೆಗೆ ಕರ್ನಾಟಕ ನಂದಿನಿ ತುಪ್ಪವೇ ಹೋಗುತ್ತಿದೆ.
ಇದನ್ನೂ ಓದಿ : ಚಿತ್ರದುರ್ಗ : ಹೆಂಡತಿ ಮೇಲಿನ ಸಿಟ್ಟಿಗೆ ಅತ್ತೆ-ಮಾವನನ್ನ ಬರ್ಬರವಾಗಿ ಹತ್ಯೆ ಮಾಡಿದ ಪಾಪಿ ಅಳಿಯ..!