ನವದೆಹಲಿ : 2024ರ ಲೋಕಸಭೆ ಚುಣಾವಣೆಯಲ್ಲಿ ಭರ್ಜರಿ ಬಹುಮತ ಸಾಧಿಸಿದ ಹಿನ್ನಲೆ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಆಯೋಜನೆ ಮಾಡಲಾಗಿದ್ದ ಪದಗ್ರಹಣ ಕಾರ್ಯಕ್ರಮದಲ್ಲಿ ಮೋದಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ರು. ಸತತವಾಗಿ 3 ಸಾರ್ವತ್ರಿಕ ಚುನಾವಣೆ ಗೆದ್ದು ಅಧಿಕಾರ ಸ್ವೀಕರಿಸಿದ್ದ ಜವಾಹರ್ಲಾಲ್ ನೆಹರು ನಂತರ ಮೋದಿ ಹ್ಯಾಟ್ರಿಕ್ ಪರ್ವದ ಸಾಧನೆ ಮಾಡಿದ್ದಾರೆ. ಮೂರನೇ ಬಾರಿ ಪ್ರಧಾನಿ ಪಟ್ಟಕ್ಕೇರಿದ ಮೋದಿ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿಜ್ಞಾವಿಧಿ ಭೋದಿಸಿದರು. ಇನ್ನು ಮೋದಿ 3.0 ಪ್ರಮಾಣ ವಚನ ಕಾರ್ಯಕ್ರಮಕ್ಕೆ ದೇಶದ ಗಣ್ಯಾತಿ ಗಣ್ಯರು ಸಾಕ್ಷಿಯಾಗಿದ್ರು. ಪವರ್ ಫುಲ್ ಲೀಡರ್ ಆಗಿ ಗುರುತಿಸಿಕೊಂಡಿರೋ ಮೋದಿಯ ಐತಿಹಾಸಿಕ ಪ್ರಮಾಣ ವಚನ ಕಾರ್ಯಕ್ರಮಕ್ಕೆ ವಿಶ್ವನಾಯಕರು ಕೂಡ ಭಾಗಿಯಾಗಿದ್ದರು.
ಇದನ್ನೂ ಓದಿ : ನಕಲಿ ಕ್ಲಿನಿಕ್ಗಳಿಗೆ ಬ್ರೇಕ್ ಹಾಕಲು ಸಜ್ಜಾದ ಆರೋಗ್ಯ ಇಲಾಖೆ – ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಕಲರ್ ಕೋಡ್ ಬಳಸುವಂತೆ ಆದೇಶ..!