ವಿಜಯನಗರ : ವಕ್ಫ್ ಆಸ್ತಿ ದಂಗಲ್ ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದುಕೊಳ್ತಿದೆ. ಇದೀಗ ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣ ಮಾಡುವಂತೆ ಆಗ್ರಹಿಸಿ ಖುದ್ದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ವಕ್ಫ್ ಮಂಡಳಿಯು ದೇಶದಾದ್ಯಂತ ರೈತರು, ಭೂಮಾಲೀಕರು, ದೇವಸ್ಥಾನಗಳು, ಟ್ರಸ್ಟ್ಗಳು ಮತ್ತು ಮಠಗಳ ಜಮೀನುಗಳ ಮೇಲೆ ಹಕ್ಕು ಸಾಧಿಸುವ ಅನಿಯಂತ್ರಿತ, ಸ್ಪಷ್ಟ ಉಲ್ಲಂಘನೆಯನ್ನು ಗಮನದಲ್ಲಿಟ್ಟುಕೊಂಡು ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿ ನರೇಂದ್ರ ಮೋದಿಜಿ ಅವರಿಗೆ ಪತ್ರ ಬರೆದಿದ್ದೇನೆ.
ದೇಶದ ಎಲ್ಲ ಪ್ರಜೆಗಳಿಗೂ ಭೂಮಿಯ ಮೇಲೆ ಸಮಾನ ಹಕ್ಕಿದೆ. ವಕ್ಫ್ ನ ಉದ್ದೇಶವು ಕಲ್ಯಾಣ ಮತ್ತು ಸಮಾಜ ಸೇವೆಯಾಗಿದ್ದರೆ. ಭಾರತವು ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಪಕ್ಷಪಾತ ಮತ್ತು ಧಾರ್ಮಿಕ ತಾರತಮ್ಯವಿಲ್ಲದೆ ಇದನ್ನು ಮಾಡಬೇಕಾಗಿದೆ.
ದೇಶದ ಸಂಪನ್ಮೂಲ ಯಾವುದೇ ಸೀಮಿತ ಕೋಮಿಗೆ ಸೇರುವುದು ಜಾತ್ಯತೀತ ತತ್ವದ ವಿರುದ್ಧವಾಗಿರುತ್ತದೆ. ಆದ್ದರಿಂದ, ಅದನ್ನು ಸದ್ಬಳಕೆ ಮಾಡುವ ಸದುದ್ದೇಶದಿಂದ ಪ್ರಧಾನಿ ಅವರಿಗೆ ಮನವಿ ಸಲ್ಲಿಸಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ಬೆಳಕಿನ ಹಬ್ಬದಂದೇ ಕಲ್ಯಾಣದ ಖುಷಿ ಕೊಟ್ಟ ಡಾಲಿ ಧನಂಜಯ್ - ಇಲ್ಲಿವೆ ಮುದ್ದಾದ ಜೋಡಿಯ ಪೋಟೋಸ್..!