ಉಡುಪಿ : ಕಳೆದ ನವೆಂಬರ್ ತಿಂಗಳು ನಡೆದಿದ್ದ ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್ನಿಂದ ರಾಜ್ಯದಲ್ಲಿ ನಕ್ಸಲರು ಭಯಭೀತರಾಗಿದ್ದಾರೆ. ಇಂದು ಸುಮಾರು ಆರು ಜನ ನಕ್ಸಲರು ಶರಣಾಗತಿಯಾಗಲಿದ್ದಾರೆ. ಈ ನಡುವೆ ಎನ್ಕೌಂಟರ್ಗೆ ಬಲಿಯಾಗಿದ್ದ ನಕ್ಸಲ್ ನಾಯಕ ವಿಕ್ರಂ ಗೌಡ ಸಹೋದರಿ ಸುಗುಣ, ಅಣ್ಣನ ಜೀವ ವಾಪಸ್ ಕೊಡೋದಕ್ಕೆ ಸಾಧ್ಯವಿಲ್ಲ ಪರಿಹಾರ ಆದರೂ ನೀಡಿ ಎಂದು ಮನವಿ ಮಾಡಿದ್ದಾರೆ.
ಸರೆಂಡರ್ ಆಗುವ ನಕ್ಸಲರಿಗೆ ಕೊಡುವ ಪರಿಹಾರವನ್ನು ನಮಗೂ ಕೊಡಿ ಸಾಕು. ನನ್ನ ಅಣ್ಣನ ಜೀವ ಕೊಡಲು ಸಾಧ್ಯವಿಲ್ಲ. ಎನ್ಕೌಂಟರ್ ಆಗಿದೆ, ಅವರ ಜೀವ ಹೋಗಿಯಾಗಿದೆ. ಉಳಿದವರಿಗೆ ಕೊಡುವ ಪರಿಹಾರ ನಮಗೆ ಕೊಟ್ಟರೆ ಸಾಕು. ನಾವು ಕಷ್ಟದಲ್ಲಿದ್ದೇವೆ, ಒಂದು ದಿನ ಕೆಲಸಕ್ಕೆ ಹೋಗದೆ ಇದ್ದರೆ ನಮ್ಮ ದಿನ ಸಾಗೋದಿಲ್ಲ ಎಂದು ಸುಗುಣ ಹೇಳಿದರು.
ಸಿಎಂ ಸಿದ್ದರಾಮಯ್ಯ ಮುಂದೆ ನಕ್ಸಲರು ಶರಣು : ಸಿಎಂ ಸಿದ್ದರಾಮಯ್ಯ ಭರವಸೆ ಮೇರೆಗೆ ನಕ್ಸಲರು ಮುಖ್ಯವಾಹಿನಿಗೆ ಬಂದು ಸಿಎಂ ಮುಂದೆಯೇ ಶರಣಾಗಲಿದ್ದಾರೆ. 6 ನಕ್ಸಲರಿಗೆ ಸರ್ಕಾರದಿಂದಲೇ ವಾಹನದ ವ್ಯವಸ್ಥೆ ಮಾಡಲಾಗಿದ್ದು, ಇದೀಗ ಟೀಂ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಬರುತ್ತಿದೆ. ಮುಂಡಗಾರು ಲತಾ, ವನಜಾಕ್ಷಿ, ಸುಂದರಿ, ಜಯಣ್ಣ,ವಸಂತ್ ಮತ್ತು ಜೀಶ್ ಶಸ್ತ್ರ ತ್ಯಜಿಸಿ ಸರೆಂಡರ್ ಆಗಲಿದ್ದಾರೆ.
ಇದನ್ನೂ ಓದಿ : “ರಾವಣಾಪುರ” ಟ್ರೇಲರ್ ರಿಲೀಸ್ – ಜ.17ಕ್ಕೆ ಸಿನಿಮಾ ರಿಲೀಸ್..!