ಬಿಜಾಪುರ : ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಸೈನಿಕರ ವಾಹನವನ್ನು ಗುರಿಯಾಗಿಸಿಕೊಂಡು ನಕ್ಸಲರು ಮಾಡಿದ ಐಇಡಿ ಸ್ಫೋಟದಿಂದ 8 ಸಿಆರ್‌ಪಿಎಫ್ ಯೋಧರು, ಓರ್ವ ಚಾಲಕ ಸೇರಿ 9 ಮಂದಿ ಹುತಾತ್ಮರಾಗಿದ್ದಾರೆ. ಹಲವು ಗಾಯಾಳು ಸಿಆರ್‌ಪಿಎಫ್ ಯೋಧರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಛತ್ತೀಸ್‌ಗಢದಲ್ಲಿ ಮಾವೋವಾದಿ ಬೇದ್ರೆ-ಕುಟ್ರು ರಸ್ತೆಯಲ್ಲಿ ನಕ್ಸಲರಿಂದ ಈ ಅಟ್ಟಹಾಸ ನಡೆದಿದೆ. ಮಾವೋವಾದಿಗಳು ಯೋಧರ ವಾಹನವನ್ನು ಸ್ಫೋಟಿಸಲು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಿದ್ದು, ಇಂದು ಮಧ್ಯಾಹ್ನ 2.15ರ ಸುಮಾರಿಗೆ ಯೋಧರ ವಾಹನವನ್ನು ಸ್ಫೋಟಿಸಿದ್ದಾರೆ. ವರದಿಗಳ ಪ್ರಕಾರ ಈ ಸೇನಾ ವಾಹನದಲ್ಲಿ 20 ಯೋಧರು ಪ್ರಯಾಣಿಸುತ್ತಿದ್ದರು. ಜಂಟಿ ಕಾರ್ಯಾಚರಣೆ ಬಳಿಕ ವಾಪಸಾಗುತ್ತಿದ್ದಾಗ ಸ್ಫೋಟ ಸಂಭವಿಸಿದೆ.
ಇಂದು ಮುಂಜಾನೆ ಛತ್ತೀಸ್‌ಗಢದ ಅಬುಜ್ಮದ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮಾವೋವಾದಿಗಳ ಮೇಲೆ ದಾಳಿ ಮಾಡಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಬಂಡುಕೋರರನ್ನು ಹತ್ಯೆಗೈದಿದ್ದಾರೆ. ಸ್ವಯಂಚಾಲಿತ ಶಸ್ತ್ರಾಸ್ತ್ರಗಳಾದ ಎಕೆ 47 ಮತ್ತು ಸೆಲ್ಫ್ ಲೋಡ್ ರೈಫಲ್ಸ್ ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಬಳಿಕ ವಾಪಸಾಗುತ್ತಿದ್ದಾಗ ಯೋಧರನ್ನು ಗುರಿಯಾಗಿಸಿಕೊಂಡಾಗ ಬಂಡುಕೋರರು ಅಟ್ಟಹಾಸ ಮೆರದಿದ್ದಾರೆ.
ಈ ಘಟನೆ ನಡೆದ ಸ್ಥಳದಲ್ಲಿ ಬೃಹತ್ ಹೊಂಡ ಉಂಟಾಗಿದೆ. ಇದು ಯೋಧರನ್ನು ಕೊಂದ ಐಇಡಿ ಸ್ಫೋಟದ ತೀವ್ರತೆಯನ್ನು ಸೂಚಿಸುತ್ತದೆ. ಬಸ್ತಾರ್‌ನ ಬಿಜೆಪಿ ಸಂಸದ ಮಹೇಶ್ ಕಶ್ಯಪ್ ದಾಳಿಯನ್ನು “ಹೇಡಿತನ” ಎಂದು ಬಣ್ಣಿಸಿದ್ದಾರೆ. ಈ ಘಟನೆಯಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ನಾನು ನನ್ನ ಸಂತಾಪ. ನಾವು ಸೈನಿಕರ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ : 3ನೇ ಕ್ಲಾಸ್ ವಿದ್ಯಾರ್ಥಿನಿಗೆ ಹೃದಯಾಘಾತ.. ಟೀಚರ್ ಕಣ್ಣೆದುರೇ ಕೊನೆಯುಸಿರೆಳೆದ ಬಾಲಕಿ..!