Download Our App

Follow us

Home » ರಾಜ್ಯ » ನ್ಯಾಯಾಲಯದ ಆದೇಶ ಪಾಲಿಸಲು ನಿರ್ಲಕ್ಷ್ಯ – ರಾಜ್ಯ ಸರ್ಕಾರ ಮತ್ತು ಎಲ್ಲಾ ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌..!

ನ್ಯಾಯಾಲಯದ ಆದೇಶ ಪಾಲಿಸಲು ನಿರ್ಲಕ್ಷ್ಯ – ರಾಜ್ಯ ಸರ್ಕಾರ ಮತ್ತು ಎಲ್ಲಾ ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌..!

ಬೆಂಗಳೂರು : ನ್ಯಾಯಾಲಯದ ಆದೇಶ ಹಾಗೂ ನಿರ್ದೇಶನಗಳನ್ನು ಪಾಲನೆ ಮಾಡಲು ರಾಜ್ಯದ ಎಲ್ಲಾ ಇಲಾಖೆಗಳಲ್ಲಿ ಆಂತರಿಕ ಮೇಲ್ವಿಚಾರಣಾ ವ್ಯವಸ್ಥೆ ಆರಂಭಿಸಬೇಕೆಂಬ ವಿಷಯದಲ್ಲಿ ದಾಖಲಿಸಿಕೊಳ್ಳಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಸರ್ಕಾರದ ಎಲ್ಲಾ ಇಲಾಖೆಗಳಿಗೆ ಮಂಗಳವಾರ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ನ್ಯಾಯಾಲಯಗಳ ಆದೇಶ ಪಾಲಿಸಲು ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಪ್ರದರ್ಶಿಸುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ರಾಜ್ಯ ಸರ್ಕಾರ ಸೇರಿದಂತೆ ಎಲ್ಲಾ ಇಲಾಖೆಗಳಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಜೂನ್‌ 5ಕ್ಕೆ ಮುಂದೂಡಿದೆ.

ನ್ಯಾಯಾಲಯದ ಆದೇಶಗಳ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವುದರಿಂದ ಸಮರ್ಪಕವಾಗಿ ಕಾರ್ಯನಿರ್ವಹಿಸಲು ವಿಫಲವಾಗುತ್ತಿದೆ. ನ್ಯಾಯಾಲಯಗಳು ತಮ್ಮ ಅಧಿಕಾರ  ಕಳೆದುಕೊಳ್ಳುತ್ತಿವೆ. ಕೋರ್ಟ್‌ ಆದೇಶಗಳು ಸರ್ಕಾರಿ ಅಧಿಕಾರಿಗಳ ಮೇಲೆ ಯಾವುದೇ ಪರಿಣಾಮ ಬೀರುತ್ತಿಲ್ಲ ಎಂದು ಸಾರ್ವಜನಿಕರು ನಿರ್ಧರಿಸುವ ಪರಿಸ್ಥಿತಿಯನ್ನು ಸೃಷ್ಟಿ ಮಾಡಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾಯಪೀಠ ಈ ಸಂಬಂಧ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.

ಅರ್ಜಿಯಲ್ಲಿ ಏನಿದೆ? ನ್ಯಾಯಾಲಯದ ಆದೇಶಗಳನ್ನು ಪಾಲಿಸಲು ಸರ್ಕಾರ ಹಾಗೂ ಸಕ್ಷಮ ಪ್ರಾಧಿಕಾರಗಳು ಯಾವ ರೀತಿಯ ಕಾರ್ಯವಿಧಾನ ಅಳವಡಿಸಿಕೊಳ್ಳಬೇಕು? ಆದೇಶ ಪಾಲನೆ ವಿಚಾರಗಳನ್ನು ನಿರ್ವಹಿಸಲು ವಿಶೇಷ ಶಾಖೆ ಹಾಗೂ ಸಕ್ಷಮ ಅಧಿಕಾರಿಗಳನ್ನು ನೇಮಿಸಲಾಗಿದೆಯೇ? ಯಾವುದಾದರೂ ವ್ಯವಸ್ಥೆ ರೂಪಿಸಲಾಗಿದೆಯೇ? ನ್ಯಾಯಾಲಯದ ಆದೇಶವನ್ನು ಜಾರಿಗೊಳಿಸಲು, ಅದನ್ನು ಮೇಲ್ವಿಚಾರಣೆ ನಡೆಸಲು ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ? ನ್ಯಾಯಾಲಯದ ಆದೇಶಗಳ ಬಗ್ಗೆ ನಿರ್ಲಕ್ಷ ವಹಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಕ್ಕೆ ಯಾವ ವ್ಯವಸ್ಥೆ ರೂಪಿಸಲಾಗಿದೆ? ಈವರೆಗೂ ಅಂತಹ ಅಧಿಕಾರಿಗಳ ವಿರುದ್ಧ ಕೈಗೊಳ್ಳಲಾಗಿರುವ ಕ್ರಮಗಳೇನು? ಎಂಬುದಕ್ಕೆ ಉತ್ತರ ನೀಡುವಂತೆ ಅರ್ಜಿಯಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ : ಏ.26 ರಂದು ರಾಜ್ಯದಲ್ಲಿ ಮೊದಲ ಹಂತದ ಮತದಾನ – ಬಹಿರಂಗ ಪ್ರಚಾರಕ್ಕೆ ಇಂದು ತೆರೆ..!

Leave a Comment

DG Ad

RELATED LATEST NEWS

Top Headlines

“ಫಾರೆಸ್ಟ್”ಚಿತ್ರದ “ಪೈಸಾ ಪೈಸಾ ಪೈಸಾ” ಹಾಡಿಗೆ ಫ್ಯಾನ್ಸ್ ಫಿದಾ – ಅಡ್ವೆಂಚರ್ಸ್ ಕಾಮಿಡಿಯ ಸಿನಿಮಾ ಜನವರಿ 24ಕ್ಕೆ ರಿಲೀಸ್!

ಬೆಂಗಳೂರು : ಆರಂಭದಿಂದಲೂ ಕುತೂಹಲ ಮೂಡಿಸಿರುವ ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ ಮಲ್ಟಿ ಸ್ಟಾರರ್ ಸಿನಿಮಾ “ಫಾರೆಸ್ಟ್” ಚಿತ್ರದ “ಪೈಸಾ ಪೈಸಾ ಪೈಸಾ” ಹಾಡು ಇತ್ತೀಚೆಗೆ ಬಿಡುಗಡೆಯಾಗಿ 5

Live Cricket

Add Your Heading Text Here