Download Our App

Follow us

Home » ಅಪರಾಧ » ನೇಹಾ ಹ*ತ್ಯೆ ಕೇಸ್ – ಮರಣೋತ್ತರ ಪರೀಕ್ಷೆ ವರದಿಯಲ್ಲಿ ಸ್ಫೋಟಕ ಮಾಹಿತಿ ಬಯಲು..!

ನೇಹಾ ಹ*ತ್ಯೆ ಕೇಸ್ – ಮರಣೋತ್ತರ ಪರೀಕ್ಷೆ ವರದಿಯಲ್ಲಿ ಸ್ಫೋಟಕ ಮಾಹಿತಿ ಬಯಲು..!

ಹುಬ್ಬಳ್ಳಿ : ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಬೆಚ್ಚಿಬೀಳಿಸುವ ಅಂಶವೊಂದು ಬಹಿರಂಗವಾಗಿದೆ. ಹೌದು, ಆರೋಪಿ ಫಯಾಜ್, ಪ್ರೀತಿ ನಿರಾಕರಿಸಿದ ನೇಹಾಳ ಹೃದಯಕ್ಕೆ ಮೊದಲು ಇರಿದಿದ್ದಾನೆ. ನಂತರ 30 ಸೆಕೆಂಡುಗಳಲ್ಲಿ ಮನಬಂದಂತೆ 14 ಬಾರಿ ಚುಚ್ಚಿ ಕೊಂದಿದ್ದಾನೆ. ನೇಹಾ ಹಿರೇಮಠ ದೇಹದ ಮೇಲೆ 14 ಗಾಯಗಳ ಗುರುತು ಪತ್ತೆಯಾಗಿದೆ. ಕುತ್ತಿಗೆಗೆ ಹಲವು ಬಾರಿ ಇರಿದಿದ್ದರಿಂದ ರಕ್ತನಾಳ ಕಟ್ ಆಗಿ ವಿಪರೀತ ರಕ್ತಸ್ರಾವವಾಗಿದೆ ಎಂಬ ವಿಚಾರ ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದೆ.

ಪ್ರಕರಣದ ವಿವರ: ಏ.18 ಸಂಜೆ 4.45ರ ಸುಮಾರಿಗೆ ಆರೋಪಿ ಫಯಾಜ್ ತನ್ನ ಕೈಯಲ್ಲಿ ಚಾಕು ಹಿಡಿದು, ಹುಬ್ಬಳ್ಳಿ ಬಿವಿಬಿ ಕಾಲೇಜು ಕ್ಯಾಂಪಸ್ ಒಳಗೆ ಎಂಟ್ರಿ ಕೊಟ್ಟಿದ್ದನು. ಇತ್ತ ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ್ದಾನೆ. ನೇಹಾಳನ್ನು ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿನಿಯರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ನೇಹಾ ಮೃತಪಟ್ಟಿದ್ದಾಳೆ.

ಇತ್ತ ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿ ಕಿಮ್ಸ್ ಆಸ್ಪತ್ರೆಯ ಹಿಂಬಂದಿ ಅವಿತಿದ್ದ ಫಯಾಜ್‍ನನ್ನು ಬಂಧಿಸಲಾಗಿದೆ. ಸುದ್ದಿ ಹಬ್ಬುತ್ತಿದ್ದಂತೆಯೇ ಹುಬ್ಬಳ್ಳಿಯಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಇಳಿದವು. ಆರೋಪಿಯನ್ನು ಎನ್ ಕೌಂಟರ್ ಮಾಡಿ ಇಲ್ಲವೇ ಗಲ್ಲಿಗೇರಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.  ಜೊತೆಗೆ #JusticeForNeha ಎಂಬ ಅಭಿಯಾನ ಕೂಡ ಸಾಮಾಜಿಕ ಜಾಲತಾಣದಲ್ಲಿ ಆರಂಭಿಸಲಾಗಿದೆ.

ಇದನ್ನೂ ಓದಿ : ಮಾಜಿ ಸಿಎಂ ಸೇರಿ 22ಕ್ಕೂ ಹೆಚ್ಚು ಪ್ರಯಾಣಿಕರ ಲಗೇಜ್ ಬೆಂಗಳೂರಿನಲ್ಲೇ ಬಿಟ್ಟು ಬೆಳಗಾವಿಗೆ ಬಂದ ಇಂಡಿಗೋ ವಿಮಾನ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here