Download Our App

Follow us

Home » ಅಪರಾಧ » ನೇಹಾ ಹ*ತ್ಯೆ ಕೇಸ್​ – ಆರೋಪಿ ಫಯಾಜ್ 6 ದಿನ ಸಿಐಡಿ ಕಸ್ಟಡಿಗೆ..!

ನೇಹಾ ಹ*ತ್ಯೆ ಕೇಸ್​ – ಆರೋಪಿ ಫಯಾಜ್ 6 ದಿನ ಸಿಐಡಿ ಕಸ್ಟಡಿಗೆ..!

ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿಯನ್ನು ಸಿಐಡಿ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದಿದ್ದ ನೇಹಾ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಒಂದನೇ JMFC ನ್ಯಾಯಾಲಯ ಆರೋಪಿ ಫಯಾಜ್​ನನ್ನು 6 ದಿನಗಳ ಕಾಲ ಸಿಐಡಿ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ.

ಇತ್ತೀಚೆಗಷ್ಟೇ ಹುಬ್ಬಳ್ಳಿ-ಧಾರವಾಡ ಕಾರ್ಪೊರೇಟರ್ ನಿರಂಜನ ಹಿರೇಮಠ ಮಗಳು ನೇಹಾ ಹಿರೇಮಠಳನ್ನು ಬಿವಿಬಿ ಕಾಲೇಜು ಆವರಣದಲ್ಲಿ ದುಷ್ಕರ್ಮಿ ಫಯಾಜ್ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ. ಕೃತ್ಯದ ಒಂದೇ ಗಂಟೆಯಲ್ಲಿ ಆರೋಪಿ ಫಯಾಜ್​ನನ್ನು ವಿದ್ಯಾನಗರ ಠಾಣೆ ಪೊಲಿಸರು ಬಂಧಿಸಿದ್ದರು. ಬಂಧಿತ ಆರೋಪಿಯನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇದೀಗ ಸಿಐಡಿ ಪೊಲೀಸರು 6 ದಿನಗಳ ಕಾಲ ಕಸ್ಯಡಿಗೆ ಪಡೆದುಕೊಂಡಿದ್ದಾರೆ.

ಪ್ರಕರಣದ ವಿವರ : ಏ.18 ರ ಸಂಜೆ 4.45ರ ಸುಮಾರಿಗೆ ಆರೋಪಿ ಫಯಾಜ್ ತನ್ನ ಕೈಯಲ್ಲಿ ಚಾಕು ಹಿಡಿದು, ಹುಬ್ಬಳ್ಳಿ ಬಿವಿಬಿ ಕಾಲೇಜು ಕ್ಯಾಂಪಸ್ ಒಳಗೆ ಎಂಟ್ರಿ ಕೊಟ್ಟಿದ್ದನು. ಇತ್ತ ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ್ದಾನೆ. ನೇಹಾಳನ್ನು ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿನಿಯರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ನೇಹಾ ಮೃತಪಟ್ಟಿದ್ದಳು.

ಇತ್ತ ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿ ಕಿಮ್ಸ್ ಆಸ್ಪತ್ರೆಯ ಹಿಂಬಂದಿ ಅವಿತಿದ್ದ ಫಯಾಜ್‍ನನ್ನು ಬಂಧಿಸಲಾಗಿದೆ. ಸುದ್ದಿ ಹಬ್ಬುತ್ತಿದ್ದಂತೆಯೇ ಹುಬ್ಬಳ್ಳಿಯಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಇಳಿದಿದ್ದವು. ಆರೋಪಿಯನ್ನು ಎನ್​ಕೌಂಟರ್ ಮಾಡಿ ಇಲ್ಲವೇ ಗಲ್ಲಿಗೇರಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದರು. ಇಂದು ಕೂಡ ಪ್ರತಿಭಟನೆ ಮುಂದುವರಿದಿದೆ. ಜೊತೆಗೆ #JusticeForNeha ಎಂಬ ಅಭಿಯಾನ ಕೂಡ ಸಾಮಾಜಿಕ ಜಾಲತಾಣದಲ್ಲಿ ಆರಂಭಿಸಲಾಗಿದೆ.

ಇದನ್ನೂ ಓದಿ : ಮೆಗಾಸ್ಟಾರ್ ಚಿರಂಜೀವಿ ಫ್ಯಾಮಿಲಿಯಲ್ಲಿ ಮತ್ತೊಂದು ಡಿವೋರ್ಸ್ – ಸ್ಫೋಟಕ ಭವಿಷ್ಯ ನುಡಿದ ಜ್ಯೋತಿಷಿ..!

Leave a Comment

DG Ad

RELATED LATEST NEWS

Top Headlines

ಪ್ಲೀಸ್‌ ಒಂದು ಚಾನ್ಸ್​ ಕೊಡಿ ಬಿಗ್​ಬಾಸ್… ಜಗದೀಶ್, ರಂಜಿತ್ ಹೊರಹೋಗ್ತಿದ್ದಂತೆ ಕಣ್ಣೀರಿಟ್ಟ ಸ್ಪರ್ಧಿಗಳು..!

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಶಾಕಿಂಗ್ ಬೆಳವಣಿಗೆ ನಡೆಯುತ್ತಿದೆ. ಸ್ಪರ್ಧಿಗಳೆಲ್ಲರೂ ಜಗದೀಶ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದರಿಂದ ಜಗದೀಶ್ ಕೋಪಗೊಂಡು ಮಹಿಳಾ ಸ್ಪರ್ಧಿಗಳ ವಿರುದ್ಧ ಅಶ್ಲೀಲ

Live Cricket

Add Your Heading Text Here