ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಬರ್ಬರ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕೊಲೆ ಪ್ರಕರಣದಲ್ಲಿ ಪೊಲೀಸರು ಆರೋಪಿ ಫಯಾಜ್‌ನನ್ನು ವಶಕ್ಕೆ ಪಡೆದಿದ್ದಾರೆ. ಆತನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಅತ್ಯುಗ್ರ ಶಿಕ್ಷೆ ನೀಡುವಂತೆ ಆಗ್ರಹಿಸುತ್ತಿದ್ದಾರೆ.
ನೇಹಾ ಹಿರೇಮಠ್ ಹತ್ಯೆ ಪ್ರಕರಣದಿಂದ ಇಡೀ ರಾಜ್ಯವೇ ಬಿದ್ದಿದ್ದು, ಆರೋಪಿ ಫಯಾಜ್ಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ, ಆರೋಪಿ ಫಯಾಜ್ ತಾಯಿ ಮಮ್ತಾಜ್ ಇಡೀ ರಾಜ್ಯಕ್ಕೆ ಕ್ಷಮೆ ಕೇಳಿದ್ದಾರೆ.
ಮೊದಲು ನನ್ನ ಮಗ (ಫಯಾಜ್) ಓದಿನಲ್ಲಿ ತುಂಬಾ ಜಾಣನಾಗಿದ್ದ. ನನ್ನ ಮಗನಿಗೆ ನೇಹಾಳೇ ಪ್ರಪೋಸ್ ಮಾಡಿದ್ದಳು. ನನ್ನ ಬಳಿ ಅವನು ಹೇಳಿದಾಗ ನಾನು ಲವ್ ಬೇಡ ಎಂದಿದ್ದೆ. ಆದರೆ ಈಗ ಇಂಥಾ ತಪ್ಪು ಮಾಡಿದ್ದಾನೆ, ಆತನಿಗೆ ತಕ್ಕ ಶಿಕ್ಷೆ ಆಗ್ಬೇಕು ಎಂದು ತಾಯಿ ಮಮ್ತಾಜ್ ಹೇಳಿದ್ದಾರೆ.
ನನ್ನ ಮಗ ಫಯಾಜ್ KAS ಆಫೀಸರ್ ಆಗೋ ಕನಸು ಕಟ್ಟಿಕೊಂಡಿದ್ದ. ನೇಹಾ ಕೂಡಾ ತುಂಬಾ ಒಳ್ಳೆಯ ಹುಡುಗಿಯಾಗಿದ್ದಳು. ಅವರಿಬ್ಬರೂ ಮದುವೆ ಆಗಬೇಕು ಅಂತ ಅಂದುಕೊಂಡಿದ್ರು, ನೂರಾರು ಮಕ್ಕಳಿಗೆ ನಾನು ಶಿಕ್ಷಣ ಕೊಡ್ತೀನಿ. ತಪ್ಪು ಮಾಡಿರೋ ನನ್ನ ಮಗನಿಗೂ ತಕ್ಕ ಶಿಕ್ಷೆ ಆಗಲಿ ಎಂದು ಬೇಸರಿದಂದ ಹೇಳಿದ್ದಾರೆ.
ಇದನ್ನೂ ಓದಿ : ನೇಹಾ ಹಿರೇಮಠ್ ಹ*ತ್ಯೆ ಪ್ರಕರಣ – ಗೃಹ ಸಚಿವ ಪರಮೇಶ್ವರ್ ವಿರುದ್ಧ ಭುಗಿಲೆದ್ದ ಆಕ್ರೋಶ..!