Download Our App

Follow us

Home » ರಾಜಕೀಯ » ನೇಹಾ ಪ್ರಕರಣ ಸಿಬಿಐಗೆ ಹೋಗೋ ಸಂದರ್ಭ ಬಂದಿಲ್ಲ – ಗೃಹ ಸಚಿವ ಡಾ.ಜಿ.ಪರಮೇಶ್ವರ್..!

ನೇಹಾ ಪ್ರಕರಣ ಸಿಬಿಐಗೆ ಹೋಗೋ ಸಂದರ್ಭ ಬಂದಿಲ್ಲ – ಗೃಹ ಸಚಿವ ಡಾ.ಜಿ.ಪರಮೇಶ್ವರ್..!

ಬೆಂಗಳೂರು : ನೇಹಾ ಹತ್ಯೆ ಪ್ರಕರಣ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೀತಿದೆ. ಆಕ್ರೋಶ ವ್ಯಕ್ತವಾಗ್ತಿದೆ. ಈ ನಡುವೆ  ಈ ಪ್ರಕರಣ ಕೈ- ಕಮಲದ ರಾಜಕೀಯ ಕಿತ್ತಾಟಕ್ಕೆ ದಾಳವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಆಗ್ರಹಿಸಿದ್ದರು. ಇದೀಗ ಈ ಹೇಳಿಕೆಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಜೆ.ಪಿ ನಡ್ಡಾ ಹೇಳಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ನೇಹಾ ಪ್ರಕರಣ ಸಿಬಿಐಗೆ ಹೋಗೋ ಸಂದರ್ಭ ಬಂದಿಲ್ಲ. ಕೊಲೆಯಾದ ಒಂದೇ ಗಂಟೆಯಲ್ಲಿ ಆರೋಪಿಯನ್ನು ಪೊಲೀಸರು ಹಿಡಿದಿದ್ದಾರೆ. ಈ ಪ್ರಕರಣದ ಬಗ್ಗೆ ಪೊಲೀಸರು ಸಮರ್ಥವಾಗಿ ತನಿಖೆ ಮಾಡುತ್ತಿದ್ದಾರೆ. ಧರ್ಮ, ಜಾತಿ ಕಾರಣಕ್ಕೆ ಯಾರನ್ನೂ ರಕ್ಷಣೆ ಮಾಡಲ್ಲ ಎಂದು ತಿಳಿಸಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಸಾಕಷ್ಟು ಕೇಸ್ ಸಿಬಿಐಗೆ​ ಕೊಟ್ಟಿದ್ದೇವೆ ಆ ಎಲ್ಲಾ ಕೇಸ್​ಗಳ ತನಿಖೆ ಏನಾಗಿದೆ ಅಂತಾ ನೋಡಿದ್ದೀರಿ. ಆರೋಪಿ ದೇಶಬಿಟ್ಟು ಎಲ್ಲೂ ಓಡಿ ಹೋಗಿಲ್ಲ. ಎಲ್ಲಾ ಆಯಾಮಗಳಲ್ಲೂ ತನಿಖೆ ಮಾಡುತ್ತಿದ್ದೇವೆ. ಕಾನೂನು ರೀತಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತೇವೆ. ಪೊಲೀಸ್ ತನಿಖೆಯಲ್ಲಿ ಏನ್​ ಹೊರಬರುತ್ತೆ ನೋಡೋಣ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಮಾಜಿ ಸಿಎಂ ಸೇರಿ 22ಕ್ಕೂ ಹೆಚ್ಚು ಪ್ರಯಾಣಿಕರ ಲಗೇಜ್ ಬೆಂಗಳೂರಿನಲ್ಲೇ ಬಿಟ್ಟು ಬೆಳಗಾವಿಗೆ ಬಂದ ಇಂಡಿಗೋ ವಿಮಾನ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here