Download Our App

Follow us

Home » ರಾಜಕೀಯ » ನೇಹಾ ಹಿರೇಮಠ್ ಹ*ತ್ಯೆ ಪ್ರಕರಣ – ಗೃಹ ಸಚಿವ ಪರಮೇಶ್ವರ್ ವಿರುದ್ಧ ಭುಗಿಲೆದ್ದ ಆಕ್ರೋಶ..!

ನೇಹಾ ಹಿರೇಮಠ್ ಹ*ತ್ಯೆ ಪ್ರಕರಣ – ಗೃಹ ಸಚಿವ ಪರಮೇಶ್ವರ್ ವಿರುದ್ಧ ಭುಗಿಲೆದ್ದ ಆಕ್ರೋಶ..!

ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಹತ್ಯೆ ಪ್ರಕರಣದಿಂದ ಇಡೀ ರಾಜ್ಯವೇ ಬೆಚ್ಚಿ ಬಿದ್ದಿದೆ. ಆರೋಪಿ ಫಯಾಜ್​​ಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ಕೂಡ ನಡೆಯುತ್ತಿದೆ. ಹೀಗಿರುವಾಗಲೇ ನೇಹಾ ಕೊಲೆ ವೈಯಕ್ತಿಕ ಎಂಬ ಹೇಳಿಕೆ ನೀಡಿರುವ ಗೃಹ ಸಚಿವ ಪರಮೇಶ್ವರ್ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಇನ್ನೊಂದೆಡೆ ಪರಮೇಶ್ವರ್ ರಾಜೀನಾಮೆಗೆ ವಿವಿಧ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ-ಜೆಡಿಎಸ್ ಪಟ್ಟು ಹಿಡಿದಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೋಂ ಮಿನಿಸ್ಟರ್​​ ಪರಮೇಶ್ವರ್​​​ ನಿವಾಸದ ಬಳಿ ABVP ಪ್ರೊಟೆಸ್ಟ್​ ನಡೆಸಿದ್ದು, ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹ ಮಾಡಿದ್ದಾರೆ. ಪ್ರೊಟೆಸ್ಟ್ ವೇಳೆ ಎಬಿವಿಪಿ ಕಾರ್ಯಕರ್ತರು ಪರಮೇಶ್ವರ್ ಮನೆಗೆ ಮುತ್ತಿಗೆ ಹಾಕಲು ಮುಂದಾಗಿರುವ ಘಟನೆ ನಡೆದಿದೆ. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಕಾರ್ಯಕರ್ತರು ಏಕಾಏಕಿ ಗೃಹ ಸಚಿವ ಪರಮೇಶ್ವರ್ ಮನೆ ಮೇಲೆ ಮುತ್ತಿಗೆ ಹಾಕಿದ್ದಾರೆ.​​ ನೇಹಾ ಕೊಲೆ ವೈಯಕ್ತಿಕ ಎಂಬ ಗೃಹ ಸಚಿವ ಪರಮೇಶ್ವರ್ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ಪರಮೇಶ್ವರ್​ ನಿವಾಸಕ್ಕೆ ಬಿಗಿ ಭದ್ರತೆ ವದಗಿಸಲಾಗಿದ್ದು, ಸದಾಶಿವನಗರ ನಿವಾಸದ ಬಳಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. 100ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿ ಬಿಗಿ ಭದ್ರತೆ ವದಗಿಸಲಾಗಿದೆ.

ಇದನ್ನೂ ಓದಿ : ಕುಖ್ಯಾತ ರೌಡಿ ಶೀಟರ್ ಕುಣಿಗಲ್ ಗಿರಿ ಕೊ*ಲೆಗೆ ಸಂಚು : ಇಬ್ಬರು ಆರೋಪಿಗಳು ಸಿಸಿಬಿ ಬಲೆಗೆ..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here