ಬೆಂಗಳೂರು : ವಿಧಾನಪರಿಷತ್‌ಗೆ ಅವಿರೋಧವಾಗಿ ಆಯ್ಕೆಯಾಗಿರುವ ನೂತನ ಶಾಸಕರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಕಾಂಗ್ರೆಸ್‌ನಿಂದ ಸ್ಫರ್ಧಿಸಿ ಸಚಿವ ಎನ್.ಎಸ್.ಬೋಸರಾಜು, ಕೆ.ಗೋವಿಂದರಾಜು, ಎ.ವಸಂತಕುಮಾರ್, ಡಾ.ಯತೀಂದ್ರ ಸಿದ್ದರಾಮಯ್ಯ, ಐವಾನ್ ಡಿಸೋಜ, ಜಗದೇವ ಗುತ್ತೇದಾರ್, ಬಲ್ಕೀಸ್ ಬಾನು, ಡಿ.ಟಿ.ಶ್ರೀನಿವಾಸ, ರಾಮೋಜಿಗೌಡ, ಡಾ. ಚಂದ್ರಶೇಖರ ಬಸವರಾಜ ಪಾಟೀಲ ಸೇರಿದಂತೆ 10 ಮಂದಿ ಚುನಾಯಿತರಾಗಿದ್ದಾರೆ.
ಬಿಜೆಪಿಯಿಂದ ಸ್ಪರ್ಧಿಸಿ ಸಿ.ಟಿ.ರವಿ, ಎನ್.ರವಿಕುಮಾರ್, ಮೂಳೆ ಮಾರುತಿರಾವ್, ಡಾ.ಧನಂಜಯ ಸರ್ಜಿ ಸೇರಿದಂತೆ ನಾಲ್ಕು ಮಂದಿ ಆಯ್ಕೆಯಾಗಿದ್ದು, JDSನಿಂದ ಕೆ.ಬಿ.ವಿವೇಕಾನಂದ, S.L.ಭೋಜೆಗೌಡ ಆಯ್ಕೆಯಾಗಿದ್ದಾರೆ. ಒಟ್ಟು 17 ಮಂದಿ MLCಗಳು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇದನ್ನೂ ಓದಿ : ಮಲ್ಲೇಶ್ವರಂನಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಕೊ*ಲೆ..!