ಮಂಡ್ಯ : 2025ರ ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದೆ. ಸಕ್ಕರೆ ನಾಡು ಮಂಡ್ಯದಲ್ಲಿ ಹೊಸ ವರ್ಷಾಚರಣೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ನ್ಯೂ ಇಯರ್ ಸಂಭ್ರಮದಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಮಂಡ್ಯದ ಕೆಆರ್ಎಸ್ ಡ್ಯಾಂ, ಭರಚುಕ್ಕಿ, ಗಗನಚುಕ್ಕಿ, ಕಾವೇರಿ ನದಿ ತೀರ ಸೇರಿ ಪ್ರೇಕ್ಷಣೀಯ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
KRS ಹಿನ್ನೀರು, ಬಲಮುರಿ, ಎಡಮುರಿ, ಕಾವೇರಿ ತೀರಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಇಂದು ರಾತ್ರಿಯಿಂದ ನಾಳೆ ರಾತ್ರಿ 8ರ ತನಕ ಪ್ರವಾಸಿ ತಾಣಗಳಲ್ಲಿ ಪ್ರವೇಶ ಹಾಗೂ ನಿಷೇಧಾಷ್ಞೆ ಜಾರಿ ಮಾಡಲಾಗಿದೆ ಎಂದು ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದರು. ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ ತೀರದಲ್ಲೂ ನಿಷೇಧಾಜ್ಞೆ ಹೊರಡಿಸಿದ್ದಾರೆ.
ಮಂಡ್ಯದ ಭರಚುಕ್ಕಿ, ಗಗನಚುಕ್ಕಿ ಫಾಲ್ಸ್ಗಳ ಬಳಿಗೂ ಪ್ರವೇಶ ನಿರ್ಬಂಧಿಸಿದ್ದಾರೆ. ಹೊಸ ಜೋಶ್ನಲ್ಲಿ ಅನಾಹುತ ಸಂಭವಿಸುವ ಆತಂಕದ ಮುನ್ನೆಚ್ಚರಿಕಾ ಕ್ರಮವಾಗಿ ನದಿ, ಜಲಪಾತಗಳಿಗೆ ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ನಿರ್ಬಂಧ ವಿಧಿಸಿದ್ದಾರೆ.
ಹೊಸ ವರ್ಷಾಚರಣೆ ನೆಪದಲ್ಲಿ ನಿಷೇಧಾಜ್ಞೆ ಉಲ್ಲಂಘನೆ ಮಾಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಹೊಸ ವರ್ಷಕ್ಕೆ ಮಲ್ಪೆ ಬೀಚ್ನಲ್ಲಿ ಜನಸಾಗರ.. ಕೃಷ್ಣನಗರಿಯಲ್ಲಿ ಪ್ರವಾಸಿಗರ ಜಾತ್ರೆ!