ಮುಖ್ಯ ರಸ್ತೆಯ ವೀವ್ ಪಾಯಿಂಟ್, ಯಾತ್ರಿ ನಿವಾಸ, ರಾಣಿ ಫಾಲ್ಸ್, ಮುಂಬಯಿ ಬಂಗಲೆ, ಮುಂಗಾರು ಮಳೆ ಪಾಯಿಂಟ್ ಸೇರಿದಂತೆ ಇತರೆ ಸ್ಥಳಗಳಿಂದ ಪ್ರವಾಸಿಗರು ಜಲಪಾತದ ಸೊಬಗು ಕಣ್ತುಂಬಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಜೋಗ ಜಲಪಾತದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಜಲಪಾತ ವೀಕ್ಷಿಸಲು ತೆರಳುವ ಮುಖ್ಯ ಪ್ರವೇಶ ದ್ವಾರದ ಗೋಪುರ ನಿರ್ಮಾಣ ಕಾಮಗಾರಿಯೂ ಪ್ರಗತಿಯಲ್ಲಿದೆ. ಇದರಿಂದಾಗಿ 3 ತಿಂಗಳ ಕಾಲ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ನಿಬರ್ಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ಪ್ರತಿ ವರ್ಷ ಡಿಸೆಂಬರ್ ಕೊನೆಯ ವಾರದಲ್ಲಿ ಜೋಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿತ್ತು. ಆದರೆ, ಈ ವರ್ಷ ಪ್ರವೇಶ ನಿಷೇಧಿಸುವ ಮುನ್ನವೇ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿತ್ತು. ಜೋಗ ವೀಕ್ಷಣೆಯ ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು, ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ :KAS ಸೇರಿ ವಿವಿಧ ಎಕ್ಸಾಮ್ಗಳಲ್ಲಿ ಪಾಸ್ ಮಾಡಿಸೋದಾಗಿ ಲಕ್ಷ-ಲಕ್ಷ ವಂಚನೆ.. ಟಿಕೆಟ್ ಇನ್ಸ್‌ಪೆಕ್ಟರ್ ಬಂಧನ..!