ವಿಜಯಪುರ : ವಿಜಯಪುರ ನಗರದ ಸಿದ್ದೇಶ್ವರ ಬಡಾವಣೆಯ ನವವಿವಾಹಿತ ಜೋಡಿ ನೇಣಿಗೆ ಶರಣಾಗಿದ್ದಾರೆ. 30 ವರ್ಷದ ಮನೋಜಕುಮಾರ ಪೋಳ ಮತ್ತು 23 ವರ್ಷದ ರಾಖಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ನಾಲ್ಕು ತಿಂಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿ ನಿನ್ನೆ ತಡರಾತ್ರಿ ಊಟ ಮಾಡಿದ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ಇನ್ನೂ ಕಾರಣ ತಿಳಿದುಬಂದಿಲ್ಲ. ಮನೋಜ್ ಕುಮಾರ್ ತಾಯಿ ಭಾರತಿ ತಮ್ಮ ಮಗಳ ಊರಿಗೆ ಹೋಗಿದ್ದರು. ಇಂದು ಬೆಳಿಗ್ಗೆ ವಾಪಸ್ ಬಂದಾಗ ನೇಣುಬಿಗಿದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿದೆ. ಈ ಪ್ರಕರಣವನ್ನು ಜಲನಗರ ಪೊಲೀಸರು ದಾಖಲು ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನಮಂಟಪ’ ಸಿನಿಮಾದ ಚಿತ್ರೀಕರಣ ಮುಕ್ತಾಯ..!
Post Views: 269