Download Our App

Follow us

Home » ರಾಜ್ಯ » ಹೊಸ ವರ್ಷಕ್ಕೆ ಭರ್ಜರಿ ‘ಎಣ್ಣೆ’ ಸೇಲ್​ – ಅಬಕಾರಿ ಇಲಾಖೆಗೆ ಒಂದೇ ದಿನ ಬರೋಬ್ಬರಿ 308 ಕೋಟಿ ಆದಾಯ..!

ಹೊಸ ವರ್ಷಕ್ಕೆ ಭರ್ಜರಿ ‘ಎಣ್ಣೆ’ ಸೇಲ್​ – ಅಬಕಾರಿ ಇಲಾಖೆಗೆ ಒಂದೇ ದಿನ ಬರೋಬ್ಬರಿ 308 ಕೋಟಿ ಆದಾಯ..!

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ನೂರಾರು ಕೋಟಿ ರುಪಾಯಿ ಆದಾಯ ಹರಿದು ಬಂದಿದೆ. ಡಿಸೆಂಬರ್ 31ರ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ, ಅರ್ಧ ದಿನದ ಅವಧಿಯಲ್ಲಿ ಕೆಎಸ್​ಬಿಸಿಎಲ್​ನಿಂದ ಬರೋಬ್ಬರಿ 308 ಕೋಟಿ ರುಪಾಯಿ ಮದ್ಯ ಮಾರಾಟವಾಗಿದೆ. ಅಬಕಾರಿ ಇಲಾಖೆಯ ನಿರೀಕ್ಷೆಗೂ ಮೀರಿ ಮಾರಾಟವಾಗಿದೆ.

ಅಬಕಾರಿ ಇಲಾಖೆ 250 ಕೋಟಿ ರೂ. ಮೌಲ್ಯದ ಮದ್ಯ ಮಾರಾಟದ ಗುರಿ ಇಟ್ಟುಕೊಂಡಿತ್ತು. ಆದರೆ, ಅದನ್ನೂ ಮೀರಿ ಮಾರಾಟವಾಗಿದೆ. ಕಳೆದ ವರ್ಷ 2023ರ ಡಿಸೆಂಬರ್ 31 ರಂದು 193 ಕೋಟಿ ರುಪಾಯಿ ಮದ್ಯ ಮಾರಾಟ ಆಗಿತ್ತು.

2024 ಡಿಸೆಂಬರ್ 31 ರಂದು 7,305 ಮದ್ಯ ಮಾರಾಟಗಾರರು ಕೆಎಸ್​ಬಿಸಿಎಲ್​​ನಿಂದ ಮದ್ಯ ಖರೀದಿ ಮಾಡಿದ್ದಾರೆ. ಐಎಂಎಲ್ 4,83,715 ಲಕ್ಷ ಬಾಕ್ಸ್ ಮಾರಾಟದಿಂದ 250.25 ಕೋಟಿ ಆದಾಯ ಸಂಗ್ರಹವಾಗಿದೆ. ಬಿಯರ್- 2,92,339 ಲಕ್ಷ ಬಾಕ್ಸ್ ಮಾರಾಟದಿಂದ 57,75 ಕೋಟಿ ಆದಾಯ ಸಂಗ್ರಹವಾಗಿದೆ. ಒಟ್ಟು 7,76,042 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ ಒಟ್ಟು 308 ಕೋಟಿ ರುಪಾಯಿ ‌ಆದಾಯ ಸಂಗ್ರಹವಾಗಿದೆ.

ಡಿಸೆಂಬರ್ 27 ಭರ್ಜರಿ ಮದ್ಯ ಮಾರಾಟ : 27-12-2024ರ ಶುಕ್ರವಾರದಂದು ಕೂಡ ಬರೋಬ್ಬರಿ 408.58 ಕೋಟಿ ರುಪಾಯಿ ಮದ್ಯ ಮಾರಾಟವಾಗಿತ್ತು. ಐಎಂಎಲ್ 6,22,062 ಲಕ್ಷ ಬಾಕ್ಸ್ ಮಾರಾಟದಿಂದ 327,50 ಕೋಟಿ ರುಪಾಯಿ ಆದಾಯ ಸಂಗ್ರಹವಾಗಿತ್ತು. ಬಿಯರ್ 4,04,998 ಲಕ್ಷ ಬಾಕ್ಸ್ ಮಾರಾಟದಿಂದ 80.58 ಕೋಟಿ ರುಪಾಯಿ ಆದಾಯ ಗಳಿಕೆಯಾಗಿತ್ತು. ಐಎಂಎಲ್, ಬಿಯರ್ ಸೇರಿ ಒಟ್ಟು- 10,27,060 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ 408.50 ಕೋಟಿ ರುಪಾಯಿ ಆದಾಯ ಹರಿದುಬಂದಿತ್ತು.

ಏತನ್ಮಧ್ಯೆ, ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆ ಸಂಭ್ರಮದಿಂದ ನಡೆದಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿ ಲಕ್ಷಾಂತರ ಮಂದಿ ಸಂಭ್ರಮದಿಂದ ಕುಣಿದು ಕುಪ್ಪಳಿಸಿದ್ದಾರೆ. ಕೆಲವೆಡೆ ಸಣ್ಣಪುಟ್ಟ ಅಹಿತಕರ ಘಟನೆಗಳು ನಡೆದಿದ್ದು ಬಿಟ್ಟರೆ, ಒಟ್ಟಾರೆಯಾಗಿ ಹೊಸ ವರ್ಷದ ಸ್ವಾಗತ, ಸಂಭ್ರಮಾಚರಣೆ ಶಾಂತಿಯುತವಾಗಿ ನೆರವೇರಿದೆ.

ಇದನ್ನೂ ಓದಿ : ಹೊಸ ವರ್ಷದ ಮೊದಲ ದಿನ ರಾಜ್ಯದಲ್ಲಿ ಮಳೆಯಾಗುತ್ತಾ? ಹವಾಮಾನ ಇಲಾಖೆ ಹೇಳೋದೇನು?

Leave a Comment

DG Ad

RELATED LATEST NEWS

Top Headlines

ಪ್ರಯಾಣಿಕರಿಗೆ ಬಿಗ್​​ ಶಾಕ್​​.. ನಾಳೆಯಿಂದಲೇ KSRTC ಟಿಕೆಟ್​ ದರ​​​​ ಏರಿಕೆ – ನಿಮ್ಮ ಊರಿಗೆ ಎಷ್ಟು ರೇಟ್?

ಬೆಂಗಳೂರು : ರಾಜ್ಯ ಸರ್ಕಾರ ನಾಲ್ಕು ನಿಗಮಗಳ ಬಸ್​​ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸಾಲು ಸಾಲು ಬೆಲೆ ಏರಿಕೆಯಿಂದ ತತ್ತರಿಸಿರೋ

Live Cricket

Add Your Heading Text Here