ದುಬೈ : 2024ರ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಚೊಚ್ಚಲ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಿನ್ನೆ ಈ ಹೈವೋಲ್ಟೇಜ್ ಪಂದ್ಯ ನಡೆದಿದ್ದು, ನ್ಯೂಜಿಲೆಂಡ್ ತಂಡ 32 ರನ್ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದೆ.
ಇನ್ನು ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಫೈನಲ್ಗೇರಿದ್ದ ದಕ್ಷಿಣ ಆಫ್ರಿಕಾ ತಂಡ ಮತ್ತೊಮ್ಮೆ ಫೈನಲ್ ಪಂದ್ಯದಲ್ಲಿ ಸೋತು ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಕಳೆದ ಆವೃತ್ತಿಯಲ್ಲೂ ಫೈನಲ್ಗೇರಿದ್ದ ದಕ್ಷಿಣ ಆಫ್ರಿಕಾ ತಂಡ, ಆಸ್ಟ್ರೇಲಿಯಾ ವಿರುದ್ಧ ಸೋತು ಪ್ರಶಸ್ತಿಯಿಂದ ವಂಚಿತವಾಗಿತ್ತು.
ಇದೀಗ ಸತತ ಎರಡನೇ ಬಾರಿಯೂ ಪ್ರಶಸ್ತಿ ಎತ್ತಿ ಹಿಡಿಯುವಲ್ಲಿ ವಿಫಲವಾಗಿದೆ. ಇನ್ನು 2010ರ ಬಳಿಕ ಇದೇ ಮೊದಲ ಬಾರಿಗೆ ಫೈನಲ್ಗೇರಿದ್ದ ನ್ಯೂಜಿಲೆಂಡ್ ತಂಡ ಸೋಫಿ ಡಿವೈನ್ ನಾಯಕತ್ವದಲ್ಲಿ ಇದೇ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಇದನ್ನೂ ಓದಿ : ಜಗದೀಶ್ನನ್ನು ರಂಜಿತ್ ಅಷ್ಟೇ ಅಲ್ಲ ಈ ನಟಿ ಕೂಡ ತಳ್ಳಿದ್ರಾ? ನೀವು ಕೂಡ ಔಟ್ ಆಗ್ಬೇಕಿತ್ತು ಎಂದಿದ್ಯಾರಿಗೆ ಕಿಚ್ಚ ಸುದೀಪ್?