Download Our App

Follow us

Home » ಸಿನಿಮಾ » ‘ನೈಸ್ ರೋಡ್’ ಸಿನಮಾಗೆ ಕಂಟಕ – ನಿರ್ಮಾಪಕರಿಗೆ ನೋಟಿಸ್​​, ಅಷ್ಟಕ್ಕೂ ಆಗಿದ್ದೇನು?

‘ನೈಸ್ ರೋಡ್’ ಸಿನಮಾಗೆ ಕಂಟಕ – ನಿರ್ಮಾಪಕರಿಗೆ ನೋಟಿಸ್​​, ಅಷ್ಟಕ್ಕೂ ಆಗಿದ್ದೇನು?

ಟ ಧರ್ಮ ಅಭಿನಯದ  ‘ನೈಸ್ ರೋಡ್’  ಕನ್ನಡ ಚಿತ್ರಕ್ಕೆ ನೈಸ್ ರೋಡ್ ಕಂಪನಿಯವರಿಂದಲೇ ಕಂಟಕ ಶುರುವಾಗಿದೆ. ‘ನೈಸ್ ರೋಡ್’ ಎಂಬ ಹೆಸರನ್ನು ಬದಲಾಯಿಸದೆ ಇದ್ದರೆ ಕಂಪ್ಲೆಂಟ್ ಕೊಡುವುದಾಗಿ ಈ ಸಿನಿಮಾದ ನಿರ್ಮಾಪಕರಾದ ಗೋಪಾಲ್ ಹಳೆಪಾಳ್ಯ ಅವರಿಗೆ ನೋಟಿಸ್ ನೀಡಿದ್ದಾರೆ.

ಸಿನಿಮಾ ಈಗ ರಿಲೀಸ್ ಹಂತಕ್ಕೆ ಬಂದಿದ್ದು, ಏಲ್ಲಾ ಕಡೆ ನೈಸ್ ರೋಡ್ ಎಂಬ ಹೆಸರಿನಿಂದನೆ ಪ್ರಚಾರವಾಗಿದೆ. ಈ ಹಂತದಲ್ಲಿ ಹೆಸರು ಬದಲಾಯಿಸಲು ತುಂಬಾ ಖರ್ಚು ವೆಚ್ಚಗಳಾಗುವುದು ಅಲ್ಲದೆ, ತುಂಬಾ ಸಮಯವು ಬೇಕಾಗುತ್ತದೆ.

 

ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೈಸ್ ರೋಡ್ ಎಂಬ ಟೈಟಲ್ ರಿಜಿಸ್ಟರ್ ಆಗಿದೆ. ಸಿನಿಮಾ ಚಿತ್ರೀಕರಣ ಮುಗಿಸಿ ಈಗಾಗಲೇ ಸಿನಿಮಾ ಸೆನ್ಸಾರ್ ಆಗಿದ್ದು, ಸೆನ್ಸಾರ್ ಮಂಡಳಿಯು ಕೂಡ ಸಿನಿಮಾ ನೋಡಿ ನೈಸ್ ರೋಡಿಗೂ ಈ ಸಿನಿಮಾಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ನಿರ್ಧರಿಸಿ U/A ಪ್ರಮಾಣ ಪತ್ರ ನೀಡಿದೆ.

ಆದರೆ, ಈಗ ನೈಸ್ ರೋಡ್ ಕಂಪನಿಯವರು ಏಕಾಏಕಿ ಹೆಸರು ಚೇಂಜ್ ಮಾಡಲೇಬೇಕು ಎಂದು ನೋಟೀಸ್ ನೀಡಿದ್ದಾರೆ. ಈ ವಿಷಯಕ್ಕೆ ಸಂಬಂಧಪಟ್ಟಂತೆ ನಮ್ಮ ಚಿತ್ರಕ್ಕೆ ಫೈನಾನ್ಸ್ ಮಾಡಿರುವ ಎನ್ ರಾಜು ಗೌಡ ಮತ್ತು ಈ ಸಿನಿಮಾದ ನಟರಾದ ಧರ್ಮ ಅವರ ಜೊತೆ ಮಾತಾಡಿ ಒಂದು ನಿರ್ಧಾರ ತೆಗೆದುಕೊಳ್ಳುತ್ತೇನೆ” ಎನ್ನುತ್ತಿದ್ದಾರೆ. ಮುಂದೆ ಈ  ಚಿತ್ರತಂಡ ಸಿನಿಮಾದ ಹೆಸರು ಬದಲಾಯಿಸುತ್ತಾರೋ ಇಲ್ಲ ಇದೆ ಹೆಸರಿನಲ್ಲೆ ಸಿನಿಮಾ ಬಿಡುಗಡೆ ಮಾಡುತ್ತಾರೋ ಎಂದು ಕಾದುನೋಡಬೇಕಿದೆ.

 

ಇನ್ನು ಈ ಸಿನಿಮಾದಲ್ಲಿ ನಟ ಧರ್ಮ ಅವರು ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜ್ಯೋತಿ ರೈ, ಗಿರಿಜಾ ಲೋಕೇಶ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಗೋವಿಂದೇಗೌಡ, ಮಂಜುನಾಥ್ ರಂಗಾಯಣ, ಪ್ರಭು ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸತೀಶ್ ಆರ್ಯನ್ ಈ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ : ಪುನೀತ್ ಕೆರೆಹಳ್ಳಿ ಬಟ್ಟೆ ಬಿಚ್ಚಿ ಹಲ್ಲೆ ಮಾಡಿದ ಪ್ರಕರಣದ ಬಗ್ಗೆ ಭೈರಪ್ಪ ಹರೀಶ್ ಕುಮಾರ್ ಆಕ್ರೋಶ..!

Leave a Comment

DG Ad

RELATED LATEST NEWS

Top Headlines

ಹಾಸನಾಂಬೆ ಸನ್ನಿಧಿಯಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಮಧ್ಯೆ ಮಾರಾಮಾರಿ..!

ಹಾಸನ : ಹಾಸನದ ಹಾಸನಾಂಬೆ ದೇವಿಯ ಉತ್ಸವ ಆರಂಭವಾಗಿದೆ. ಅಕ್ಟೋಬರ್ 24ರಂದು ದೇಗುಲದ ಬಾಗಿಲು ತೆರೆಯಲಾಗಿದೆ. ನವೆಂಬರ್ 3ರವರೆಗೆ ಉತ್ಸವ ನಡೆಯುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ

Live Cricket

Add Your Heading Text Here