Download Our App

Follow us

Home » ಜಿಲ್ಲೆ » ನಿಖಿಲ್ ಕುಮಾರಸ್ವಾಮಿ ಸೋಲಿಂದ ಮನನೊಂದ ಅಭಿಮಾನಿ – ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ..!

ನಿಖಿಲ್ ಕುಮಾರಸ್ವಾಮಿ ಸೋಲಿಂದ ಮನನೊಂದ ಅಭಿಮಾನಿ – ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ..!

ರಾಮನಗರ : ಚನ್ನಪಟ್ಟಣ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಕ್ಕೆ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚನ್ನಪಟ್ಟಣದ ಕೂಡ್ಲೂರು ಬಳಿಯ ಶ್ರೀರಾಂಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿ.

‘ನಾನು ನಿಖಿಲ್ ಅಭಿಮಾನಿ. ನನ್ನ ಸಾವಿಗೆ ನಾನೇ ಕಾರಣ. ಜೈ ಜೆಡಿಎಸ್, ಎನ್​ಡಿಎ’ ಎಂದು ಪತ್ರ ಪರೆದಿಟ್ಟು ವಿಷ ಸೇವಿಸಿದ್ದಾನೆ. ಈತನನ್ನು ಮಂಡ್ಯದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಪ್ರಾಣಪಾಯದಿಂದ ಪರಾಗಿದ್ದಾನೆ. ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಸೋಲು ಕಂಡಿದ್ದರಿಂದ ಈತ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಚನ್ನಪಟ್ಟಣ ಫಲಿತಾಂಶ : ಕರ್ನಾಟಕದ ಮೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಚನ್ನಪಟ್ಟಣದಲ್ಲಿ ಗೆದ್ದೇ ಗೆಲ್ಲುತ್ತಾರೆ ಎಂದು ಮೈತ್ರಿ ನಾಯಕರು ಭಾವಿಸಿದ್ದರೂ ನಿಖಿಲ್ ಸೋಲನುಭವಿಸಿದ್ದಾರೆ. ಇದರೊಂದಿಗೆ, ನಿಖಿಲ್ ಸತತ ಮೂರು ಚುನಾವಣೆಗಳಲ್ಲಿ ಸೋಲನುಭವಿಸಿದಂತಾಗಿದೆ.

ಚನ್ನಪಟ್ಟಣ ಉಪಚುನಾವಣೆ ಫಲಿತಾಂಶದ ಅಂಕಿಅಂಶಗಳನ್ನು ನೋಡುವುದಾದರೆ, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ 25,515 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಯೋಗೇಶ್ವರ್​ಗೆ 1,12,642 ಮತ ದೊರೆತರೆ, ಎನ್​ಡಿಎ ಅಭ್ಯರ್ಥಿ ನಿಖಿಲ್‌ಗೆ 87,229 ಮತಗಳು ದೊರೆತಿವೆ.

ಇದನ್ನೂ ಓದಿ : ಇಲ್ಲಿ ಮಣ್ಣಿನ ಗೊಂಬೆ, ಕೀಲಿ ಗೊಂಬೆಗಳು ತುಂಬಾ ಇದಾವೆ – ಚೈತ್ರಾ, ಮೋಕ್ಷಿತಾಗೆ ತ್ರಿವಿಕ್ರಮ್ ಕೌಂಟರ್​​..!

Leave a Comment

DG Ad

RELATED LATEST NEWS

Top Headlines

ಕಟೀಲು ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದ ನಟ ಉಪೇಂದ್ರ..!

ಸ್ಯಾಂಡಲ್​ವುಡ್​ನ ರಿಯಲ್ ಸ್ಟಾರ್, ನಟ ಉಪೇಂದ್ರ ಅಭಿನಯದ ‘ಯುಐ’ ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ. ಈ ಹಿನ್ನೆಲೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ‘ಯುಐ’ ಟೀಮ್ ಜೊತೆ ನಟ ಉಪೇಂದ್ರ

Live Cricket

Add Your Heading Text Here