ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆ ಸಮರದಲ್ಲಿ ತೀವ್ರ ಪೈಪೋಟಿಗೆ, ಜಿದ್ದಾಜಿದ್ದಿಗೆ ಸಾಕ್ಷಿಯಾಗಿದ್ದ ಮತ್ತು ಕಾಂಗ್ರೆಸ್ ಹಾಗೂ ಎನ್ಡಿಎ ಮಿತ್ರಪಕ್ಷಗಳ ಪ್ರತಿಷ್ಠೆಯ ಕಣವಾಗಿದ್ದು ಚನ್ನಪಟ್ಟಣ ಕ್ಷೇತ್ರ .
ಈ ಅಖಾಡದಲ್ಲಿ ಗೆಲ್ಲಲು ಎರಡು ಪಕ್ಷಗಳು ಅಬ್ಬರದ ಪ್ರಚಾರ ನಡೆಸಿತ್ತು. ಆದರೆ ಕೊನೆ ಗಳಿಗೆಯಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್ನ ಸಿಪಿ ಯೋಗೇಶ್ವರ್ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.
ಈ ಹಿಂದೆ ಎರಡು ಚುನಾವಣೆಗಳಲ್ಲಿ ಸೋಲು ಅನುಭವಿಸಿದ್ದ ನಿಖಿಲ್, ಈ ಬಾರಿ ಗೆದ್ದೇ ಗೆಲ್ಲುವ ನಿರೀಕ್ಷೆಯಲ್ಲಿದ್ರು. ಆದ್ರೆ ಮತ್ತೆ ಸೋಲು ನಿಖಿಲ್ ಪಾಲಾಗಿದೆ. ಮನೆ ಮಗನ ಸತತ ಸೋಲು ಗೌಡರ ಕುಟುಂಬಕ್ಕೆ ದೊಡ್ಡ ಆಘಾತ ಉಂಟುಮಾಡಿತ್ತು. ಆದರೂ ಛಲ ಬಿಡದ ‘ಅಭಿಮನ್ಯು’ ಸೋಲಿನ ಬೆನ್ನಲ್ಲೇ ‘ಸೋಲಿಗೆ ಹೆದರಿ ಸುಮ್ಮನೆ ಕೂರುವ ಜಾಯಮಾನ ನನ್ನದಲ್ಲ’ ಎಂದು ಪೋಸ್ಟ್ ಹಂಚಿಕೊಂಡಿದ್ದರು.
ಇದೀಗ ಮಂಡ್ಯ , ಚನ್ನಪಟ್ಟಣ ಸೋಲಿನ ಬಳಿಕ ನಿಖಿಲ್ ಕುಮಾರಸ್ವಾಮಿ ಹಾಸನದತ್ತ ಮುಖ ಮಾಡಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ರಾಮನಾಥಪುರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಮಾನ್ಯ ಶಾಸಕರಾದ ಶ್ರೀ ಎ ಮಂಜು ಅವರ ಜನ್ಮದಿನದ ಆಚರಣೆ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿರವರು ಹುಮ್ಮಸ್ಸಿನಿಂದ ಪಾಲ್ಗೊಂಡಿದ್ದಾರೆ.
ಇದೇ ವೇಳೆ ವಿಶ್ವಾಸದ ಮಾತನಾಡಿದ ಅವರು, ಸೋತಿದ್ದೇನೆ ಅಂತ ಕೈಕಟ್ಟಿ ಮನೆಯಲ್ಲಿ ಕೂರುವ ಜಾಯಮಾನ ತನ್ನದಲ್ಲ. ದೇವೇಗೌಡರು ಕಟ್ಟಿದ ಜೆಡಿಎಸ್ ಪಕ್ಷ ಇವತ್ತು ರಾಜ್ಯ ವಿಧಾನಸಬೆಯಲ್ಲಿ 18 ಸ್ಥಾನಕ್ಕಿಳಿದಿದೆ, ಪಕ್ಷ ಸಂಕಷ್ಟದಲ್ಲಿದ್ದಾಗ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ, ಪಕ್ಷವನ್ನು ದಡ ಮುಟ್ಟಿಸುವ ಕೆಲಸವನ್ನು ಮಾಡೋದಾಗಿ ನಿಖಿಲ್ ತಿಳಿಸಿದ್ದಾರೆ.
ಇದನ್ನೂ ಓದಿ : ಸಚಿವ ಜಮೀರ್ ಪುತ್ರನ ಸಿನಿಮಾ ಟೀಂ ಯಡವಟ್ಟು – ಕಲ್ಟ್ ಮೂವಿ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನ.. ಆಗಿದ್ದೇನು?