ರಾಮನಗರ : ರಾಜ್ಯದ ಮಿನಿ ಮಹಾಸಮರ ಎಂದೇ ಪರಿಗಣಿಸಲಾಗಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದೆ. ಹೀಗಾಗಿ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಬೈ ಎಲೆಕ್ಷನ್ ಅಖಾಡದಲ್ಲಿ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.
ಚನ್ನಪಟ್ಟಣ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿಯಾಗಿರುವ ನಿಖಿಲ್ ಕುಮಾರಸ್ವಾಮಿ ಪರವಾಗಿ ಪತ್ನಿ ರೇವತಿ ಅವರು ಇಂದು ಬೆಳಿಗ್ಗೆ ಪಟ್ಟಣದ ರೈಲು ನಿಲ್ದಾಣ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳಿ ಮತ ಯಾಚಿಸಿದ್ದಾರೆ.
ಸಾರ್ವಜನಿಕರಿಗೆ ಕರಪತ್ರ ಹಂಚಿದ ಅವರು, ಚನ್ನಪಟ್ಟಣದ ಅಭಿವೃದ್ಧಿಗಾಗಿ ನಿಖಿಲ್ ಅವರಿಗೆ ಮತ ಹಾಕುವಂತೆ ಮನವಿ ಮಾಡಿದ್ದಾರೆ. ಈ ವೇಳೆ ‘ನಿಖಿಲ್ ಅಣ್ಣಗೇ ನಾವು ವೋಟು ಹಾಕುತ್ತೇವೆ’ ಎಂದು ಸಾರ್ವಜನಿಕರು ಭರವಸೆ ನೀಡಿದ್ದಾರೆ.
ಹಾಗೆಯೇ ವಿದ್ಯಾರ್ಥಿಗಳು ರೇವತಿ ಅವರೊಂದಿಗೆ ಸೆಲ್ಪಿ ಕ್ಲಿಕ್ಕಿಸಿಕೊಂಡು ಸಂತಸಪಟ್ಟರು. ಮತಯಾಚನೆ ವೇಳೆ ಸ್ಥಳೀಯ ಜೆಡಿಎಸ್ ಮಹಿಳಾ ಕಾರ್ಯಕರ್ತರು ರೇವತಿ ಅವರಿಗೆ ಸಾಥ್ ನೀಡಿದ್ದಾರೆ. ಕಳೆದ 15 ದಿನಗಳಿಂದಲೂ ಕ್ಷೇತ್ರದಲ್ಲಿ ಬಿಡುವಿಲ್ಲದೇ ಸುತ್ತಾಡಿದ ರೇವತಿ ಅವರು, ಪತಿ ನಿಖಿಲ್ ಪರವಾಗಿ ಮತಬೇಟೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಬೈ ಎಲೆಕ್ಷನ್ ಬಹಿರಂಗ ಪ್ರಚಾರಕ್ಕೆ ಇಂದೇ ತೆರೆ.. ಮೂರೂ ಕ್ಷೇತ್ರಗಳಲ್ಲಿಂದು ಘಟಾನುಘಟಿಗಳ ಅಬ್ಬರ..!