Download Our App

Follow us

Home » ರಾಷ್ಟ್ರೀಯ » ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರ ಪತನ – ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ನಿತೀಶ್ ಕುಮಾರ್..!

ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರ ಪತನ – ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ನಿತೀಶ್ ಕುಮಾರ್..!

ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ ಅವರು ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದರೊಂದಿಗೆ ಆರ್‌ಜೆಡಿ-ಜೆಡಿಯು ನೇತೃತ್ವದ ಮೈತ್ರಿ ಸರ್ಕಾರ ಪತನವಾಗಿದೆ. ಭಾನುವಾರ (ಜ.28) ಬೆಳಗ್ಗೆ ರಾಜಭವನಕ್ಕೆ ತೆರಳಿದ್ದ ನಿತೀಶ್‌ ಕುಮಾರ್‌, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಮೂಲಕ ರಾಷ್ಟ್ರೀಯ ಜನತಾ ದಳ ಜೊತೆಗಿನ ಮೈತ್ರಿಯನ್ನು ಕೊನೆಗೊಳಿಸಿದ್ದಾರೆ.

ಎಲ್ಲಾ ಪಕ್ಷಗಳು ನಿರ್ಣಾಯಕ ಸಭೆಯ ನಂತರ ನಿತೀಶ್‌, ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರದಲ್ಲಿ ಬಿಜೆಪಿ ಜೊತೆ ನಿತೀಶ್ ಕುಮಾರ್  ಸರ್ಕಾರ ರಚನೆ ಬಹುತೇಕ ಫಿಕ್ಸ್ ಆಗಿದ್ದು, ಇಂದು ಸಂಜೆ ಅಥವಾ ಸೋಮವಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇನ್ನೊಂದೆಡೆ ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವೀಕ್ಷಕರನ್ನ ನೇಮಕ ಮಾಡಿದೆ. ಭೂಪೇಶ್ ಬಘೇಲ್ ಅವರನ್ನು ವೀಕ್ಷಕನನ್ನಾಗಿ ನೇಮಸಿದೆ. ಮಗದೊಂದು ಕಡೆ ಜೆಡಿಯುನ 10 ಶಾಸಕರನ್ನು ಸೆಳೆಯಲು ಲಾಲೂ ಪ್ರಸಾದ್ ಯತ್ನ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ಮಂಗಳೂರು : ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕನಿಂದ ಕಿರುಕುಳ – ಉದ್ರಿಕ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಹಾಸನದಲ್ಲಿ ಪತಿಯನ್ನು ಹಾಡಿ ಹೊಗಳಿದ ಭವಾನಿ ರೇವಣ್ಣ..!

ಹಾಸನ : ರಾಜಕೀಯ ಯಶಸ್ಸಿಗಾಗಿ ರೇವಣ್ಣ ದಂಪತಿ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಬೆಟ್ಟದ ರಂಗನಾಥಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದಂಪತಿ ಶ್ರೀ ವೆಂಕಟರಮಣಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಿದ್ದಾರೆ.

Live Cricket

Add Your Heading Text Here