ಬೆಂಗಳೂರು : ನಗರದ ಪ್ರಮುಖ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಈ ಪ್ರದೇಶಗಳ ಸಾರ್ವಜನಿಕರು ಸಹಕರಿಸಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ.66/11 ಕೆ.ವಿ. ಸಾರಕ್ಕಿಯಲ್ಲಿ ತುರ್ತು ಕಾರ್ಯ ಹಿನ್ನೆಲೆ ಇಂದು ಜಯನಗರದ ಹಲವೆಡೆ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲವೆಂದು ಬೆಸ್ಕಾಂ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ? ತುರ್ತು ನಿರ್ವಹಣಾ ಕೆಲಸದ ಹಿನ್ನೆಲೆ ಶಾಕಂಬರಿನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ ಸ್ವಾಮಿ ಮಟ, ಜೆ.ಪಿನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೇ, ಸಲಾರ್ಪುರಿಯಾ ಅಪಾಟ್ ಮೆಂಟ್, ನಾಗರ್ಜುನ ಅಪಾಟ್ ಮೆಂಟ್ ಪುಟ್ಟೇನಹಳ್ಳಿ, ಜಯನಗರ 4, 5, 7, 8ನೇ ಬ್ಲಾಕ್ ಪ್ರದೇಶಗಳಲ್ಲಿ ಇಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಉಳಿದಂತೆ ಐಟಿಐ ಲೇಹ್ಔಟ್, ಎಸ್. ಬಿ.ಐ ಕಾಲೋನಿ, ಅರ್.ವಿ.ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶಗಳು, 24ನೇ ಮ್ಯೇನ್, ಎಲ್ಐಸಿ ಕಚೇರಿ ಹಿಂಬಾಗ, ಎಲ್ಐಸಿ ಕಾಲೋನಿ, ಜಿ.ಪಿ.ನಗರ 5ನೇ ಹಂತ, ಸಾಯಿ ರಸ್ತೆ, ಜಿ.ಪಿ.ನಗರ 1,2,3,4,5,6ನೇ ಹಂತ, 15ನೇ ಕ್ರಾಸ್, 16 & 12 ನೇ ಅಡ್ಡ ರಸ್ತೆ, ಸಿಂದೂರ ಕನ್ವೇಷನ್ ಹಾಲ್ ಸುತ್ತಮುತ್ತಲ ಪ್ರದೇಶಗಳು ಸೇರಿದಂತೆ ಅಸ್ಡರ್ ಹಾಸ್ಪಟಲ್, 15ನೇ ಕ್ರಾಸ್ ಅಂಡರ್ ಪಾಸ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಹೆಣ್ಣೂರು ಬಂಡೆ, ಸಮುದ್ರಿಕಾ ಎನ್‌ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜ್, ಕೆ.ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್‌ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್‌ಶಿಪ್, ನಗರಗಿರಿ ಟೌನ್‌ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿ.ಎಸ್.ಐ ಗೇಟ್, ಬೈರತಿ ಕ್ರಾಸ್, ಬೈರತಿ ಹಳ್ಳಿ, ಎವರ್ ಗ್ರೀನ್ ಲೇಔಟ್, ಕನಕ ಶ್ರೀ ಲೇಔಟ್, ಗೆದ್ದಲ ಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್‌ಮೆಂಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈಕಲ್ ಸ್ಕೂಲ್, ಬಿ.ಹೆಚ್.ಕೆ. ಇಂಡಸ್ಟಿçÃಸ್, ಜಾನಕೀ ರಾಮ್ ಲೇಔಟ್, ವಡ್ಡರ ಪಾಳ್ಯ, ಅನುಗ್ರಹ ಲೇಔಟ್, ಕಾವೇರಿ ಲೇಔಟ್, ಆತ್ಮ ವಿದ್ಯಾನಗರ, ಬೈರತಿ ಹಳ್ಳಿ, ಕೆ.ಆರ್.ಸಿ, ದೊಡ್ಡಗುಬ್ಬಿ ಕ್ರಾಸ್, ಕುವೆಂಪು ಲೇಔಟ್, ಸಂಗಮ್ ಎನ್‌ಕ್ಲೇವ್, ಬೈರತಿ ಬಂಡೆ, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಆಂದ್ರ ಕಾಲೋನಿ ಮಂಜುನಾಥ್ ನಗರ, ಹೊರಮಾವು ಬಿಬಿಎಂಪಿ, ಅಗರ ಗ್ರಾಮ, ಪಟಾಲಮ್ಮ ಟೆಂಪಲ್, ಎ.ಕೆ.ಆರ್ ಸ್ಕೂಲ್, ಹೊಸ ಮಿಲೇನಿಯಮ್ ಸ್ಕೂಲ್, ಲಕ್ಕಮ್ಮ ಲೇಔಟ್, ಪ್ರಕಾಶ್ ಗಾರ್ಡನ್, ಕ್ರಿಶ್ಚಿಯನ್ ಕಾಲೇಜು ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವಕ್ ಕಟ್ ಇರಲಿದೆ.
ಇನ್ನು ಗ್ರಾಹಕರ ಕುಂದುಕೊರತೆಗಳನ್ನು ಆಲಿಸಲು ಮತ್ತು ಪರಿಹಾರ ಒದಗಿಸುವುದಕ್ಕಾಗಿ ನವೆಂಬರ್ 16ರಂದು ಎಲ್ಲಾ ಉಪವಿಭಾಗಗಳಲ್ಲಿ ಬೆಸ್ಕಾಂ ‘ಗ್ರಾಹಕ ಸಂವಾದ’ ಏರ್ಪಡಿಸಿದೆ. ಈ ವಿಚಾರವಾಗಿ ಟ್ವೀಟ್ ಮೂಲಕ ಬೆಸ್ಕಾಂ ಮಾಹಿತಿ ನೀಡಿದೆ. ‘ಬೆಸ್ಕಾಂನ ಎಲ್ಲಾ ಉಪವಿಭಾಗಗಳಲ್ಲಿ 2024ರ ನವೆಂಬರ್ 16 ರಂದು ಮಧ್ಯಾಹ್ನ 3:00 ರಿಂದ ಸಂಜೆ 5:30 ರವರೆಗೆ ನಡೆಯಲಿರುವ ಗ್ರಾಹಕ ಸಂವಾದ ಸಭೆಯಲ್ಲಿ ಪಾಲ್ಗೊಂಡು ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬೆಸ್ಕಾಂನ ಅಧಿಕಾರಿಗಳೊಂದಿಗೆ ಮುಖಾಮುಖಿ ಚರ್ಚಿಸಿ ಪರಿಹಾರ ಪಡೆದುಕೊಳ್ಳಿ’ ಎಂದು ಬೆಸ್ಕಾಂ ಗ್ರಾಹಕರಿಗೆ ಮನವಿ ಮಾಡಿದೆ.
ಇದನ್ನೂ ಓದಿ : ಇಂದು ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿಗೆ ಅಗ್ನಿ ಪರೀಕ್ಷೆ.. 14 ಲಕ್ಷ ಮತದಾರರ ಕೈಯಲ್ಲಿ 16 ಅಭ್ಯರ್ಥಿಗಳ ಭವಿಷ್ಯ..!