ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾ.1ರಂದು ಸಂಭವಿಸಿದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು NIA ಸ್ಪಷ್ಟನೆ ನೀಡಿದೆ.
ಬಳ್ಳಾರಿ ಮೂಲದ ವ್ಯಕ್ತಿಯನ್ನ ಬಂಧನ ಮಾಡಲಾಗಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು. ಈ ಹಿನ್ನಲೆ ಇದೀಗ ಮಾಧ್ಯಮಗಳಿಗೆ ರಾಷ್ಟ್ರೀಯ ತನಿಖಾ ದಳ (NIA) ಯಾರನ್ನೂ ಬಂಧಿಸಿಲ್ಲ ಎಂದು ಸ್ಪಷ್ಟನೆ ನೀಡಿದೆ.
ಎನ್ಐಎ ಅಧಿಕಾರಿಗಳಿಂದ ತನಿಖೆ ಚುರುಕು : ಬಾಂಬ್ ಸ್ಫೋಟ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳ ತಂಡ 5 ಮಾರ್ಚ್ 2024ರಂದು ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ತನಿಖೆ ಆರಂಭಿಸಿತ್ತು. ಎನ್ಐಎ ಎಸ್.ಪಿ ನೇತೃತ್ವದ ಮೂವರು ಅಧಿಕಾರಿಗಳು ಸ್ಥಳ ಮಹಜರು ಕೂಡ ನಡೆಸಿದ್ದರು. ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ NIA ಘೋಷಣೆ ಮಾಡಿದೆ. ಶಂಕಿತ ಆಂಧ್ರ ಪ್ರದೇಶದ ತಿರುಪತಿ ಅಥವಾ ಹೈದ್ರಾಬಾದ್ ನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸದ್ಯ ಆತನ ಬಂಧನಕ್ಕೆ ಪೊಲೀಸರು ವಿವಿಧ ರೀತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಬೆಂಗಳೂರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯ ಹ*ತ್ಯೆ : ಮೃತದೇಹವನ್ನು ಕಾರಿನಲ್ಲಿರಿಸಿ ಪರಾರಿಯಾದ ದುಷ್ಕರ್ಮಿಗಳು..!