ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಅಕ್ರಮ ನಡೆದಿದೆ ಎಂದು ದೂರು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಂದೊಡ್ಡಿರುವ ಸ್ನೇಹಮಯಿ ಕೃಷ್ಣ ಅವರಿಗೇ ಇದೀಗ ಸಮಸ್ಯೆ ಎದುರಾಗಿದೆ.
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ಮೂರನೇ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಅಕ್ಟೋಬರ್ 1ರಂದು ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ.
ಮಂಗಳವಾರ ನಡೆದ ವಿಚಾರಣೆಗೆ ಸ್ನೇಹಮಯಿ ಕೃಷ್ಣ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಮೈಸೂರಿನ ಮೂರನೇ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ರಹಿತ ಬಂಧನಕ್ಕೆ ಆದೇಶಿಸಿದೆ. ಸ್ನೇಹಮಯಿ ಕೃಷ್ಣ ವಿರುದ್ಧ 2015ರಲ್ಲಿ ಕುಮಾರ್ ಎಂಬುವವರು ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ನಿನ್ನೆ ಆದರ ವಿಚಾರಣೆ ಇತ್ತು. ಆದ್ರೆ ಸ್ನೇಹಮಯಿ ಕೃಷ್ಣ ಗೈರಾದ ಕಾರಣ ಕೋರ್ಟ್ ಈ ಆದೇಶ ಹೊರಡಿಸಿದೆ.
ಇದನ್ನೂ ಓದಿ : ಮುಡಾ ಕೇಸ್ ತನಿಖೆಗೆ ಅಧಿಕೃತವಾಗಿ ED ಎಂಟ್ರಿ – ವಿಚಾರಣೆಗೆ ಬರುವಂತೆ ಸ್ನೇಹಮಯಿ ಕೃಷ್ಣಗೆ ಸಮನ್ಸ್ ಜಾರಿ..!