ಚನ್ನಪಟ್ಟಣ : ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷ ಯಾವುದೇ ತೀರ್ಮಾನ ತೆಗೆದುಕೊಂಡರು ನಾನು ಬದ್ಧ ಎಂದು ಚನ್ನಪಟ್ಟಣದಲ್ಲಿ ಶಾಸಕ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಶಾಸಕ ಸಿ.ಪಿ ಯೋಗೇಶ್ವರ್ ಅವರು, ನಾನು ಸಚಿವ ಸ್ಥಾನಕ್ಕೆ ಒತ್ತಾಯ ಮಾಡಲ್ಲ. ನಮ್ಮ ಜಿಲ್ಲೆಯಲ್ಲಿ ಬಾಲಕೃಷ್ಣ ಸೀನಿಯರ್ ಇದ್ದಾರೆ. ನಮ್ಮ ಜಿಲ್ಲೆಯಲ್ಲಿ ಯಾರಿಗೆ ಸಚಿವ ಸ್ಥಾನ ಕೊಟ್ರು ಕೆಲಸ ಮಾಡುತ್ತೀನಿ ಎಂದಿದ್ದಾರೆ.
ಇನ್ನು ನನ್ನ ಮೂಲ ಉದ್ದೇಶ ತಾಲೂಕಿನ ಅಭಿವೃದ್ಧಿ ಮಾಡೋದು. ಇನ್ನೂ ಮೂರುವರೆ ವರ್ಷ ನನಗೆ ಅಧಿಕಾರಿ ಇದೆ. ಈ ಸಮಯದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಒತ್ತು ಕೊಡ್ತೇನೆ ಎಂದು ಚನ್ನಪಟ್ಟಣದಲ್ಲಿ ಶಾಸಕ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ.
ಇದನ್ನೂ ಓದಿ : ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ಕುಂದ್ರಾ ಮನೆ ಮೇಲೆ ED ದಾಳಿ..!
Post Views: 42