Download Our App

Follow us

Home » ಜಿಲ್ಲೆ » ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ, ಸಿಬಿಐ ತನಿಖೆಗಾಗಿ ಪ್ರಧಾನಿಗೆ ಪತ್ರ ಬರೆಯುತ್ತೇವೆ : ಸಚಿನ್ ಸಹೋದರಿ..!

ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ, ಸಿಬಿಐ ತನಿಖೆಗಾಗಿ ಪ್ರಧಾನಿಗೆ ಪತ್ರ ಬರೆಯುತ್ತೇವೆ : ಸಚಿನ್ ಸಹೋದರಿ..!

ಬೀದರ್ : ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ದೊಡ್ಡ ತಿರುವು ಸಿಕ್ಕಿದೆ. ಒಂದೆಡೆ, ಸಚಿನ್ ಗುತ್ತಿಗೆದಾರನೇ ಅಲ್ಲ ಎನ್ನುವ ಚರ್ಚೆ ನಡೆಯುತ್ತಿದ್ದರೆ, ಮತ್ತೊಂದೆಡೆ ಪ್ರಕರಣ ಮುಚ್ಚಿ ಹಾಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿದೆ ಎಂದು ಸಚಿನ್ ಸಹೋದರಿ ಸುರೇಖಾ ಆರೋಪಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯುತ್ತೇನೆ ಎಂದು ಹೇಳಿದ್ದಾರೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಗಾಂವ್‌ನಲಿ ಮಾತನಾಡಿದ ಸುರೇಖಾ, ಕಲಬುರಗಿಯಲ್ಲಿ ಸಚಿನ್ ಕೆಲಸ ಮಾಡಿಲ್ಲ. ಆತ ನಮ್ಮ ಭೇಟಿಯೇ ಆಗಿಲ್ಲ. ಸಚಿನ್ ಕೈ ಬರಹವೇ ಅದಲ್ಲ. ಸಚಿನ್ ಹುಟ್ಟಿಯೇ ಇಲ್ಲ ಎಂದು ಅವರು (ರಾಜ್ಯ ಸರ್ಕಾರ) ಮಾಡಿಬಿಡುತ್ತಾರೆ ಎಂಬ ಆತಂಕ ಇದೆ. ರಾಜ್ಯ ಸರ್ಕಾರದ ಮೇಲೆ ನಮಗೆ ನಂಬಿಕೆ ಉಳಿದಿಲ್ಲ. ಸಿಬಿಐ ತನಿಖೆ ಮಾಡಿದರೆ ನ್ಯಾಯ ಸಿಗಬಹುದು ಎಂಬ ವಿಶ್ವಾಸವಿದೆ ಎಂದಿದ್ದಾರೆ.

ಡೆತ್ ನೋಟ್​ನಲ್ಲಿ ಉಲ್ಲೇಖವಾದ ಆರೋಪಿಗಳನ್ನು ಈವರೆಗೆ ತನಿಖೆಗೆ ಒಳಪಡಿಸಿಲ್ಲ. ತನಿಖಾಧಿಕಾರಿಗಳು ನಮ್ಮನ್ನು ಮಾತ್ರ ವಿಚಾರಣೆ ಮಾಡುತ್ತಿದ್ದಾರೆ. ಇಲ್ಲಿವರೆಗೆ ತನಿಖಾಧಿಕಾರಿಗಳು ಯಾವುದೇ ಮಾಹಿತಿ ಕೊಟ್ಟಿಲ್ಲ. ಎಫ್​ಎಸ್​ಎಲ್ ವರದಿ, ಮರಣೋತ್ತರ ಪರೀಕ್ಷೆ ವರದಿ ಬಗ್ಗೆ ನಮಗೆ ಮಾಹಿತಿ ನೀಡಿಲ್ಲ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೂ ಪತ್ರ ಬರೆಯಲು ಪ್ರಯತ್ನಿಸುತ್ತೇವೆ ಎಂದು ಸುರೇಖಾ ಹೇಳಿದ್ದಾರೆ.

ಇದನ್ನೂ ಓದಿ : ಹೊಸ ಚಿತ್ರಕ್ಕಾಗಿ ಕೈ ಜೋಡಿಸಿದ KVN ಪ್ರೊಡಕ್ಷನ್ಸ್-ತೆಸ್ಪಿಯನ್ ಫಿಲ್ಮ್ಸ್..!

Leave a Comment

DG Ad

RELATED LATEST NEWS

Top Headlines

“ಫಾರೆಸ್ಟ್”ಚಿತ್ರದ “ಪೈಸಾ ಪೈಸಾ ಪೈಸಾ” ಹಾಡಿಗೆ ಫ್ಯಾನ್ಸ್ ಫಿದಾ – ಅಡ್ವೆಂಚರ್ಸ್ ಕಾಮಿಡಿಯ ಸಿನಿಮಾ ಜನವರಿ 24ಕ್ಕೆ ರಿಲೀಸ್!

ಬೆಂಗಳೂರು : ಆರಂಭದಿಂದಲೂ ಕುತೂಹಲ ಮೂಡಿಸಿರುವ ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ ಮಲ್ಟಿ ಸ್ಟಾರರ್ ಸಿನಿಮಾ “ಫಾರೆಸ್ಟ್” ಚಿತ್ರದ “ಪೈಸಾ ಪೈಸಾ ಪೈಸಾ” ಹಾಡು ಇತ್ತೀಚೆಗೆ ಬಿಡುಗಡೆಯಾಗಿ 5

Live Cricket

Add Your Heading Text Here