ನವದೆಹಲಿ : ರಾಜ್ಯಸಭೆಯ ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರ ಸೀಟ್ನಲ್ಲಿ 500 ನೋಟುಗಳ ಬಂಡಲ್ ಪತ್ತೆಯಾದ ಹಿನ್ನೆಲೆ ಇಂದು ರಾಜ್ಯಸಭೆಯಲ್ಲಿ ಕೋಲಾಹಲ ಉಂಟಾಯಿತು.
ನಿನ್ನೆ ಸದನ ಕಲಾಪ ಮುಗಿದ ನಂತರ ಭದ್ರತಾ ಪರಿಶೀಲನೆ ಸಂದರ್ಭದಲ್ಲಿ ಸಿಂಘ್ವಿಗೆ ನಿಗದಿಯಾಗಿದ್ದ 222ನೇ ಸೀಟ್ ಮೇಲೆ ನೋಟ್ ಪತ್ತೆಯಾಗಿದೆ. ಈ ಬಗ್ಗೆ ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರು ಇಂದು ಸದನಕ್ಕೆ ಮಾಹಿತಿ ನೀಡಿದ್ದಾರೆ. ನಂತರ ಈ ಪ್ರಕರಣವನ್ನು ತನಿಖೆಗೆ ಒಪ್ಪಿಸಲಾಗಿದೆ ಎಂದು ಹೇಳಿದರು.
ಈ ಸಂಬಂಧ ಆಡಳಿತ ಪಕ್ಷದ ನಾಯಕ ಜೆ.ಪಿ.ನಡ್ಡಾ ಸೇರಿ ಹಲವರು ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ವಾಗ್ದಾಳಿಗೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಆಡಳಿತ-ವಿಪಕ್ಷ ಸದಸ್ಯರ ನಡುವೆ ಕೋಲಾಹಲ ಸೃಷ್ಟಿಯಾಗಿತ್ತು. ಈ ಹಿನ್ನೆಲೆ ಸಭಾಪತಿ ಅವರು ಕೆಲ ಹೊತ್ತು ಸದನ ಕಲಾಪವನ್ನು ಮುಂದೂಡಿದರು. ಈ ಬಗ್ಗೆ ಅಭಿಷೇಕ್ ಮನು ಸಿಂಘ್ವಿ ಪ್ರತಿಕ್ರಿಯಿಸಿ, ಬಂಡಲ್ ಇರಲಿಲ್ಲ.. 500 ರೂ. ನೋಟಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ : ಕೊನೆಗೂ ಜಯನಗರ ಕ್ಷೇತ್ರಕ್ಕೆ 10 ಕೋಟಿ ಅನುದಾನ ರಿಲೀಸ್ಗೆ ಸೂಚಿಸಿದ ಡಿಸಿಎಂ ಡಿಕೆಶಿ..!