Download Our App

Follow us

Home » ರಾಜಕೀಯ » ಕನ್ನಡಿಗರಿಗೆ ಉದ್ಯೋಗ ಮೀಸಲಾತಿ – ರಾಜ್ಯ ಸರ್ಕಾರ ಮಸೂದೆ ತಡೆಹಿಡಿದಿದ್ದೇಕೆ?

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ – ರಾಜ್ಯ ಸರ್ಕಾರ ಮಸೂದೆ ತಡೆಹಿಡಿದಿದ್ದೇಕೆ?

ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಸಿಎಂ ಬರೆದುಕೊಂಡಿದ್ದಾರೆ.

ರಾಜ್ಯ ಸರ್ಕಾರ ಮಸೂದೆ ತಡೆಹಿಡಿದಿದ್ದೇಕೆ? ಕರ್ನಾಟಕದಲ್ಲಿರೋ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ. 100ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ಎರಡು ಕಾಯ್ದೆಗಳಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿತ್ತು. ಕನ್ನಡಿಗರಿಗೆ ಸಿಹಿಸುದ್ದಿ ನೀಡಿದ್ದ ಸರ್ಕಾರ ಪ್ರಮುಖ ಔದ್ಯೋಗಿಕ ಮೀಸಲಾತಿ ಮಸೂದೆ ಜಾರಿಗೆ ತರಲು ಮುಂದಾಗಿತ್ತು. ರಾಜ್ಯ ಸರ್ಕಾರದ ಈ ಮಹತ್ವದ ನಿರ್ಧಾರಕ್ಕೆ ಉದ್ಯಮಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ರು. ಸಾಮಾಜಿಕ ಜಾಲತಾಣಗಳಲ್ಲಿ ಹಲವು ಉದ್ಯಮಿಗಳು ರಾಜ್ಯ ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ.

ಖಾಸಗಿ ಕಂಪನಿಯವರು ಹೇಳೋದೇನು? ಈ ರೀತಿಯ ಕ್ರಮದಿಂದ ಐಟಿ ಉದ್ಯಮಕ್ಕೆ ತೊಂದರೆ ಆಗಲಿದೆ. ಉದ್ಯಮದಲ್ಲಿ ಗುಣಮಟ್ಟದ ಸೇವೆ ನೀಡಲು ಸಮಸ್ಯೆ ಆಗುತ್ತದೆ ಎಂದು ಉದ್ಯಮಿಗಳು ಆಕ್ರೊಶ ಹೊರಹಾಕಿದ್ದಾರೆ. ಕೆಲವರಂತೂ ಇದು ತಾರತಮ್ಯದ ಮಸೂದೆ ಎಂದು ಆಕ್ಷೇಪ ವ್ಯಕ್ತಪಸಿಡಿಸಿದ್ದಾರೆ. ಹೀಗೆ ಉದ್ಯಮ ವಲಯದಲ್ಲಿ ಆಕ್ಷೇಪ ಕೇಳಿಬಂದ ಬಳಿಕ ಎಚ್ಚೆತ್ತ ಸರ್ಕಾರ, ಮೀಸಲಾತಿ ಮಸೂದೆ ಮಂಡನೆ ನಿರ್ಧಾರದಿಂದ ಹಿಂದೆ ಸರಿದಿದೆ.

ಇದನ್ನೂ ಓದಿ : ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಹೆಚ್​.ಡಿ ರೇವಣ್ಣ – ಐಸಿಯುನಲ್ಲಿ ಚಿಕಿತ್ಸೆ..!

Leave a Comment

DG Ad

RELATED LATEST NEWS

Top Headlines

ಸಿಎಂ ಸಿದ್ದರಾಮಯ್ಯಗೆ ಸದ್ಯಕ್ಕಿಲ್ಲ CBI ಸಂಕಷ್ಟ – ಮುಡಾ ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್​!

ಧಾರವಾಡ : ಇಂದು ಧಾರವಾಡ ಹೈಕೋರ್ಟ್​ನಲ್ಲಿ ಮುಡಾ ಕೇಸ್ ತನಿಖೆ ಸಿಬಿಐಗೆ ನೀಡುವಂತೆ ಕೋರಿ​ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದಿದ್ದು, ವಾದ-ಪ್ರತಿವಾದ ಆಲಿಸಿದ  ಧಾರವಾಡ ಹೈಕೋರ್ಟ್​

Live Cricket

Add Your Heading Text Here