ನರೇಂದ್ರ ಮೋದಿ ಸರ್ಕಾರದ ಮಹತ್ವದ ನಿರ್ಣಯಗಳಲ್ಲಿ ಒಂದಾದ ‘ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾವನೆಗೆ ಮೋದಿ-ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ. ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಒಂದೇ ಬಾರಿ ನಡೆಸುವ ಮಹತ್ವದ ಯೋಜನೆ ಇದಾಗಿದ್ದು, ವಿರೋಧಗಳ ನಡುವೆಯೇ ಸಚಿವ ಸಂಪುಟ ಅನುಮೋದನೆ ಕೊಟ್ಟಿದೆ. ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ಈ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಿತ್ತು. ಸಮಿತಿಯು ಪ್ರಸ್ತಾವನೆಯನ್ನು ಅನುಮೋದಿಸಿದ ಬಳಿಕ ಸಚಿವ ಸಂಪುಟ ಅನುಮೋದನೆ ಕೊಟ್ಟಿದೆ. ಆದರೆ ಈ ಮಸೂದೆಗೆ ವಿಪಕ್ಷಗಳು ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಾ ಬಂದಿದ್ದು, ಅಧಿವೇಶನದಲ್ಲಿ ಕೂಡ ವ್ಯಾಪಕ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ.
ಚಳಿಗಾಲದ ಅಧಿವೇಶನದಲ್ಲೇ ಮಸೂದೆ ಮಂಡನೆ ಮಾಡಲಿದ್ದು, ಕೇಂದ್ರ ಸರ್ಕಾರ ಒನ್ ನೇಷನ್ ಒನ್ ಎಲೆಕ್ಷನ್ ಮಸೂದೆ ಮಂಡಿಸಲಿದೆ. ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯು ಸಿದ್ದಪಡಿಸಿದ ಈ ವರದಿಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ.
ಇದನ್ನೂ ಓದಿ : ರಿಯಲ್ ಸ್ಟಾರ್ ಹುಟ್ಟುಹಬ್ಬಕ್ಕೆ “45” ಚಿತ್ರದ ವಿಶೇಷ ಪೋಸ್ಟರ್ ರಿಲೀಸ್ – ರಾ ಲುಕ್ನಲ್ಲಿ ಉಪ್ಪಿ ಎಂಟ್ರಿ..!