Download Our App

Follow us

Home » ಮೆಟ್ರೋ » ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ನೆಲಮಂಗಲ ಟೋಲ್ ಬಳಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 302 ಕುಕ್ಕರ್​ಗಳು ಸೀಜ್..!

ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ನೆಲಮಂಗಲ ಟೋಲ್ ಬಳಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 302 ಕುಕ್ಕರ್​ಗಳು ಸೀಜ್..!

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ಇಡೀ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದ್ದು, ಅಲ್ಲಲ್ಲಿ ಚೆಕ್​ಪೋಸ್ಟ್​ಗಳನ್ನು ಹಾಕಿರುವ ಪೊಲೀಸರು ಮತ್ತು ಚುನಾವಣಾಧಿಕಾರಿಗಳು, ಚುನಾವಣಾ ಅಕ್ರಮಗಳನ್ನು ತಡೆಯಲು ಹದ್ದಿನ ಕಣ್ಣಿಟ್ಟಿದ್ದಾರೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟಿ ಕೋಟಿ ಹಣ, ಮದ್ಯ, ಚಿನ್ನಾಭರಣ ಸೀಜ್​ ಮಾಡಲಾಗಿದೆ.

ಇದರ ಬೆನ್ನಲ್ಲೇ ಇದೀಗ ಚುನಾವಣಾಧಿಕಾರಿಗಳು ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನೆಲಮಂಗಲ ಟೋಲ್​​ ಬಳಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 302 ಕಕ್ಕರ್​ಗಳನ್ನು  ಸೀಜ್​ ಮಾಡಿದ್ದಾರೆ.

ನೆಲಮಂಗಲದ ಜಾಸ್ ಟೋಲ್ ಚೆಕ್ ​ ಪೋಸ್ಟ್​ನಲ್ಲಿ ಕುಕ್ಕರ್​ಗಳನ್ನು ವಶಕ್ಕೆ ಪಡೆಯಲಾಗಿದ್ದು, ಕುಕ್ಕರ್​ಗಳನ್ನು ಮತದಾರರಿಗೆ ಹಂಚಲು ಸಾಗಿಸುತ್ತಿದ್ದರು ಎನ್ನಲಾಗಿದೆ. ಬೆಂಗಳೂರಿನಿಂದ ಹುಬ್ಬಳ್ಳಿ ಗೆ ಸಾಗುತಿದ್ದ ಕ್ಯಾಂಟರ್ ವಾಹನದಲ್ಲಿ ಸುಮಾರು 4 ಲಕ್ಷ ರೂಪಾಯಿ ಮೌಲ್ಯದ ಕುಕ್ಕರ್ ಸಾಗಿಸಲಾಗುತ್ತಿತ್ತು. FST ಟೀಮ್​​ನ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಕ್ಯಾಂಟರ್​​ ಡ್ರೈವರ್​ ಈರಣ್ಣನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ಇದನ್ನೂ ಓದಿ : ಎರಡನೇ ಹಂತದ ಎಲೆಕ್ಷನ್​ಗೆ ನಾಮಪತ್ರಗಳ ಭರಾಟೆ – ಲೋಕ ಅಖಾಡಕ್ಕೆ ಧುಮುಕಿದ ಕೋಟ್ಯಾಧಿಪತಿಗಳು..!

Leave a Comment

RELATED LATEST NEWS

Top Headlines

ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ : KSRTC ಬಸ್​ ಡ್ರೈವರ್​​ಗೆ ಚಾ*ಕುವಿನಿಂದ ಇರಿದ ಮಿನಿ ಟ್ರಕ್​​ ಡ್ರೈವರ್​​..!

ಬೆಂಗಳೂರು : ವಾಹನವನ್ನು ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ ನಡೆದು KSRTC ಬಸ್​ ಡ್ರೈವರ್​​ಗೆ ಮಿನಿ ಟ್ರಕ್​​ ಡ್ರೈವರ್ ​​ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ

Live Cricket

Add Your Heading Text Here