Download Our App

Follow us

Home » ರಾಜಕೀಯ » ಸಿದ್ದು ಸರ್ಕಾರ ಕೆಡವಲು ಆಪರೇಷನ್​ ಕಮಲ ಆಗಿತ್ತಾ? ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ..!

ಸಿದ್ದು ಸರ್ಕಾರ ಕೆಡವಲು ಆಪರೇಷನ್​ ಕಮಲ ಆಗಿತ್ತಾ? ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ..!

ಮೈಸೂರು : ಮುಡಾದಿಂದ ಸಿಎಂ ಬದಲಿ ನಿವೇಶನ ಪಡೆದಿರುವ ವಿಚಾರಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ನಾನು 2014 ರಲ್ಲಿ ಸಿಎಂ ಆಗಿದ್ದಾಗ ನನ್ನ ಹೆಂಡ್ತಿ ಬದಲಿ ನಿವೇಶನಕ್ಕೆ ಅರ್ಜಿ ಹಾಕಿದ್ದಳು. ಇದನ್ನು ಮುಡಾ ಅಧಿಕಾರಿಗಳು ನನ್ನ ಗಮನಕ್ಕೆ ತಂದಿದ್ದರು. ನಾನು ಸಿಎಂ ಆಗಿರುವ ತನಕ ಬದಲಿ ಭೂಮಿ ಕೊಡಬೇಡಿ ಎಂದಿದ್ದೆ. ಮತ್ತೆ 2021ರಲ್ಲಿ ನನ್ನ ಪತ್ನಿ ಅರ್ಜಿ ಹಾಕಿದ್ದಾಳೆ. ಆಗ ಬಿಜೆಪಿ ಸರ್ಕಾರವಿತ್ತು. ಅವ್ರು ಕಾನೂನು ರೀತಿಯಲ್ಲಿ ಬದಲಿ ಸೈಟ್ ಕೊಟ್ಟಿದ್ದಾರೆ. ನಾನು ಸೈಟು ಪಡೆಯಬೇಕು ಎಂಬ ಉದ್ದೇಶವಿದ್ರೆ ಸಿಎಂ ಆಗಿದ್ದಾಗ ನಾನೇ ಸೈಟ್ ಕೊಡಿಸುತ್ತಿದ್ದೆ. ಸಿಎಂ ಆಗಿ ನನಗೆ ಆ ಅಧಿಕಾರ ಇತ್ತು. ನಾನೇ ಪ್ರಭಾವ ಬಳಸಿ ಸೈಟು ಕೊಡಬಹುದಿತ್ತು. ಆದರೆ ನಾನು ಆ ರೀತಿ ಮಾಡಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಆಪರೇಷನ್​ ಕಮಲದ ಬಾಂಬ್​ ಸಿಡಿಸಿದ ಸಿಎಂ ಸಿದ್ದರಾಮಯ್ಯ : ಇನ್ನು ಇದೇ ವೇಳೆ ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಆಪರೇಷನ್ ಕಮಲ ಮಾಡಲು ಪ್ರಯತ್ನಿಸಿದ್ರು, ಆದ್ರೆ ಆಪರೇಷನ್​​ ಕಮಲ ಪ್ರಯತ್ನ ಸಕ್ಸಸ್​ ಆಗಲಿಲ್ಲ. ಹೀಗಾಗಿ ಈಗ ಬಿಜೆಪಿ-ಜೆಡಿಎಸ್​ ಸೇರಿ ನಮ್ಮ ಸರ್ಕಾರವನ್ನು ಕೆಡವಲು ಈ ದಾರಿ ಹಿಡಿದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ನಮ್ಮ ಸರ್ಕಾರ ಬಡವರ ಪರ ಕೆಲಸ ಮಾಡುತ್ತಿದೆ. ಹೀಗಾಗಿ ನಮ್ಮ ಸರ್ಕಾರದ ಬಗ್ಗೆ ಬಿಜೆಪಿ-ಜೆಡಿಎಸ್​ಗೆ ಭಯವಿದೆ. ಗ್ಯಾರಂಟಿಗಳನ್ನು ನಿಲ್ಲಿಸುತ್ತಾರೆಂದು ಸುಳ್ಳು ಹೇಳಿಕೆ ನೀಡಿದ್ರು, ನಾವು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿದ್ದೇವ ಹೇಳಲಿ. ಬಡವರ ಪರ ನಮ್ಮ ಸರ್ಕಾರ ಕೆಲಸ ಮಾಡುತ್ತಿರುವುದಕ್ಕೆ ಅವರಿಗೆ ಭಯವಿದೆ. ಹೀಗಾಗಿ ಬಿಜೆಪಿ-ಜೆಡಿಎಸ್ ನಮ್ಮ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಇನ್ನು ಪಾದಯಾತ್ರೆ ಮುಗಿಯುವಷ್ಟರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ ಎಂಬ ಬಿಎಸ್​ ಯಡಿಯೂರಪ್ಪ ಹೇಳಿಕೆಗೆ ಸಿಎಂ ಫುಲ್ ಗರಂ ಆಗಿದ್ದಾರೆ. ಬಿಎಸ್​​ವೈ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಆಗಿದೆ. ಹೀಗಾಗಿ ಬಿಎಸ್​ವೈಗೆ ನನ್ನ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ನ್ಯಾಯಾಲಯದ ದಯೆಯಿಂದ ಯಡಿಯೂರಪ್ಪ ಬದುಕಿದ್ದಾರೆ. ಇಲ್ಲವಾದರೇ ಯಡಿಯೂರಪ್ಪ ಜೈಲಲ್ಲಿ ಇರಬೇಕಿತ್ತು. 82 ವರ್ಷ ವಯಸ್ಸಿನಲ್ಲಿ ಇದು ಬೇಕಿತ್ತಾ? ಚಿಕ್ಕ ಮಗುವಿನ ಮೇಲೆ ಈ ರೀತಿ ಮಾಡಬೇಕಿತ್ತಾ? ಯಡಿಯೂರಪ್ಪಗೆ ಯಾವ ನೈತಿಕತೆ ಇದೆ ನನ್ನ ಬಗ್ಗೆ ಮಾತನಾಡುವುದ್ದಕ್ಕೆ. ಯಡಿಯೂರಪ್ಪ ರಾಜಕೀಯ ಜೀವನದಿಂದ ನಿವೃತ್ತಿಯಾಗಬೇಕಿತ್ತು. ಅವರಿಗೆ ರಾಜಕೀಯ ನಿವೃತ್ತರಾಗಲು ಹೇಳಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಮೈಸೂರು ಸಮಾವೇಶದಲ್ಲಿ ಬಿಜೆಪಿ ಹಗರಣಗಳನ್ನು ಬಿಚ್ಚಿಡ್ತೇನೆ. ಬಿಜೆಪಿ, ಜೆಡಿಎಸ್​ ಸರ್ಕಾರದ ಎಲ್ಲಾ ಹಗರಣಗಳನ್ನು ಬಿಚ್ಚಿಡ್ತೇನೆ. ಜೆಡಿಎಸ್, ಬಿಜೆಪಿಯವರು ಯಾವ ಹಗರಣಗಳನ್ನು ಮಾಡಿದ್ದಾರೆ. ಎಲ್ಲವನ್ನೂ ಸಂಪೂರ್ಣವಾಗಿ ಸಮಾವೇಶದಲ್ಲಿ ತೆರೆದಿಡುತ್ತೇನೆ. ಇದೆಲ್ಲವನ್ನೂ ಹೇಳಲು ಸುದ್ದಿಗೋಷ್ಠಿಯನ್ನು ನಾನು ಕರೆದಿದ್ದೆ. ಸಮಾವೇಶದಲ್ಲೇ ಹೇಳಬೇಕೆಂದು ಸುದ್ದಿಗೋಷ್ಠಿ ರದ್ದು ಮಾಡಿದೆ. ಬಿಜೆಪಿ ಸರ್ಕಾರದ ಹಗರಣ ಬಗ್ಗೆ ತನಿಖೆಯೂ ನಡೆಯುತ್ತಿದೆ ಎಂದರು.

ಇದನ್ನೂ ಓದಿ : ನೆಲಮಂಗಲದಲ್ಲಿ ಭೀಕರ ಅಪಘಾತ – ಗಂಡನ ಎದುರೇ ತುಂಬು ಗರ್ಭಿಣಿ ದುರ್ಮರಣ..!

Leave a Comment

DG Ad

RELATED LATEST NEWS

Top Headlines

ಮಂಗಳೂರಲ್ಲಿ ಕಿಡಿಗೇಡಿಗಳಿಂದ ಪ್ರಾರ್ಥನಾ ಸ್ಥಳದ ಮೇಲೆ ಕಲ್ಲೆಸೆತ – ಕರಾವಳಿಯ ಅಲ್ಲಲ್ಲಿ ಪರಿಸ್ಥಿತಿ ಉದ್ವಿಗ್ನ..!

ಮಂಗಳೂರು : ಮಂಗಳೂರಿನ ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ನಿನ್ನೆ ರಾತ್ರಿ ಪ್ರಾರ್ಥನಾ ಸ್ಥಳದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ ಘಟನೆ ನಡೆದಿದೆ. ಕಾಟಿಪಳ್ಳ 3ನೇ

Live Cricket

Add Your Heading Text Here