ಬೆಂಗಳೂರು : ಬಿಜೆಪಿ ಸಭೆಯಲ್ಲಿ ಶೋಭಾ ಕರಂದ್ಲಾಜೆ ಸ್ಪರ್ಧೆಗೆ ವಿರೋಧ ವ್ಯಕ್ತವಾಗಿದೆ. ಉಡುಪಿ, ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧೆ ಬೇಡ ಎಂದು ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ.
ಕಾಂಗ್ರೆಸ್ನ ಜಯಪ್ರಕಾಶ್ ಹೆಗಡೆಯ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಪ್ಲಾನ್ ಮಾಡಿದ್ದಾರೆ. ಕಾಂಗ್ರೆಸ್ ವಿರುದ್ಧ ಟಫ್ ಕ್ಯಾಂಡಿಡೇಟ್ನ ನಿಲ್ಲಿಸಬೇಕು. ಇಲ್ಲವಾದಲ್ಲಿ ಪಕ್ಷಕ್ಕೆ ಸಮಸ್ಯೆ ಆಗಬಹುದೆಂದು ನಾಯಕರು ಹೇಳಿದ್ದಾರೆ.
ಈ ವೇಳೆ ಪ್ರಮೋದ್ ಮಧ್ವರಾಜ್, ಜೀವರಾಜ್, ಸಿಟಿ ರವಿ ಹೆಸರು ಪ್ರಸ್ತಾಪವಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಂದಿನ ಸಭೆಗೂ ಗೈರಾಗಿದ್ದರು. ಇದೀಗ ಲೋಕಸಭೆ ಚುನಾವಣೆಗೆ ಶೋಭಾ ಕರಂದ್ಲಾಜೆ ಸ್ಪರ್ಧೆ ಮಾಡಲ್ವಾ..? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.
ಇದನ್ನೂ ಓದಿ : ರೆಡ್ಡಿ ವಿರೋಧಿಗಳಿಗೆ ಸಿನಿಮಾ ಸ್ಟೈಲ್ನಲ್ಲಿ ಖಡಕ್ ವಾರ್ನಿಂಗ್ ಕೊಟ್ಟ ಜನಾರ್ಧನ ರೆಡ್ಡಿ ಪತ್ನಿ..!
Post Views: 78