Download Our App

Follow us

Home » ಮೆಟ್ರೋ » ಬೆಂಗಳೂರಿಗೆ ಆರೆಂಜ್ ಅಲರ್ಟ್​ – ಮುಂದಿನ ನಾಲ್ಕು ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ..!

ಬೆಂಗಳೂರಿಗೆ ಆರೆಂಜ್ ಅಲರ್ಟ್​ – ಮುಂದಿನ ನಾಲ್ಕು ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ..!

ಬೆಂಗಳೂರು : ರಾಜಧಾನಿ ಬೆಂಗಳೂರಲ್ಲಿ ನಿನ್ನೆ ಬೆಳ್ಳಂಬೆಳಗ್ಗೆ ಸುರಿದ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿತ್ತು. ಬೆಳಗಿನ ಜಾವ 3 ಗಂಟೆಯಿಂದ ಸತತ ಎರಡು ಗಂಟೆಗಳ ಕಾಲ ಜಡಿದ ಮಳೆಗೆ ನಗರದ ಪ್ರಮುಖ ಭಾಗಗಳು ಜಲಾವೃತವಾಗಿತ್ತು. ಆದರೀಗ ಮುಂದಿನ 4 ದಿನ ಕೂಡ ಭಾರೀ ಮಳೆಯಾಗಲಿದೆ ಎಂಬ ಮುನ್ಸೂಚನೆ ದೊರೆತಿದೆ. ಹವಾಮಾನ ಇಲಾಖೆ ಮಳೆ ಬರಲಿದೆ ಎಂದು ಮಾಹಿತಿ ಹಂಚಿಕೊಂಡಿದೆ.

ಸಿಲಿಕಾನ್​ ಸಿಟಿಯಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದ್ದು, ಆಗಸ್ಟ್‌ 16ರವರೆಗೆ ಗುಡುಗು ಮಿಂಚು ಸಹಿತ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದಲ್ಲಿ ಇನ್ನು ನಾಲ್ಕು ದಿನ ಮೋಡ ಕವಿದ ವಾತಾವರಣ ವಿರಲಿದ್ದು, ಮಧ್ಯಾಹ್ನದ ನಂತರ ಮಿಡ್​ನೈಟ್​ವರೆಗೆ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ. ಹಾಗಾಗಿ ಹವಾಮಾನ ಇಲಾಖೆ ಬೆಂಗಳೂರಿಗೆ ಆರೆಂಜ್​ ಅಲರ್ಟ್​ ಘೋಷಣೆ ಮಾಡಿದೆ. ಜನರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಿದೆ.

ನಿನ್ನೆ ಬೆಳಗ್ಗೆ ಸುರಿದ ಮಳೆಯಿಂದಾಗಿ ಬ್ರ್ಯಾಂಡ್​ ಬೆಂಗಳೂರಿನ ಚಿತ್ರಣವೇ ಬದಲಾಗಿತ್ತು. ನೀರು ಇಂಗಿ ಹೋಗಲು ಜಾಗವಿಲ್ಲದೆ, ರಾಜ ಕಾಳುವೆಯಲ್ಲಿ ಸರಿಯಾಗಿ ನೀರು ಹರಿಯದೆ ರಸ್ತೆ ತುಂಬೆಲ್ಲಾ ನೀರು ನಿಂತಿತ್ತು. ಆದರೀಗ ಮುಂದಿನ 4 ದಿನ ಸತತ ಮಳೆಯಾದರೆ ಬೆಂಗಳೂರಿನ ಪರಿಸ್ಥಿತಿ ಬಗ್ಗೆ ಜನರು ಯೋಚಿಸಬೇಕಾಗಿದೆ.

ಇದನ್ನೂ ಓದಿ  : ಸಿಎಂ ಸಿದ್ದು ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮತ್ತೊಂದು ಖಾಸಗಿ ದೂರು ದಾಖಲು..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here