Download Our App

Follow us

Home » ಮೆಟ್ರೋ » ಬಿಬಿಎಂಪಿ ಆಸ್ತಿ ತೆರಿಗೆ ಬಾಕಿದಾರರಿಗೆ ಒಟಿಎಸ್ ಜಾರಿ..!

ಬಿಬಿಎಂಪಿ ಆಸ್ತಿ ತೆರಿಗೆ ಬಾಕಿದಾರರಿಗೆ ಒಟಿಎಸ್ ಜಾರಿ..!

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ಬಾಕಿದಾರರಿಗೆ ವಿಧಿಸಿದ್ದ ಅಧಿಕ ದಂಡ-ಬಡ್ಡಿಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ತೆರಿಗೆದಾರರ ಹಿತದೃಷ್ಟಿಯಿಂದ ಒನ್ ಟೈಮ್ ಸೆಟಲ್ ಮೆಂಟ್ ಜಾರಿ ಮಾಡಿದೆ.

ಈ ಯೋಜನೆಯಿಂದ ನಗರ ಸುಮಾರು 5.51 ಲಕ್ಷ ತೆರಿಗೆ ಬಾಕಿದಾರರು, 5- 7 ಲಕ್ಷ ತೆರಿಗೆ ವ್ಯಾಪ್ತಿಗೆ ಬಾರದವರು ಸೇರಿದಂತೆ 13- 15 ಲಕ್ಷ ಜನರಿಗೆ ಅನುಕೂಲವಾಗಲಿದೆ. ಈ ಯೋಜನೆ ಅನುಕೂಲ ಪಡೆಯುವುದಕ್ಕೆ ಜುಲೈ 31ರವರೆಗೆ ಗಡುವು ನೀಡಲಾಗಿದೆ. ಕರ್ನಾಟಕ ರಾಜ್ಯಪತ್ರದಲ್ಲಿ ಒನ್ ಟೈಮ್ ಸೆಟಲ್ ಮೆಂಟ್ ಉಲ್ಲೇಖ ಮಾಡಿದ್ದು, ಕೆಲವೊಂದು ನಿಯಮ ಮಾರ್ಪಾಡು ಮಾಡಿ ಗೆಜೆಟ್ ನಲ್ಲಿ ಆದೇಶ ನೀಡಿದೆ.

OTS ನಿಂದ ಸ್ವಯಂಘೋಷಿತ ಆಸ್ತಿ ತೆರಿಗೆದಾರರಿಗೆ ಅನುಕೂಲವಾಗಲಿದೆ. ವಸತಿ,ವಾಣಿಜ್ಯ,ಮಿಶ್ರ ಬಳಕೆ ಆಸ್ತಿದಾರರಿಗೆ ಪ್ರತ್ಯೇಕ ದರ ನಿಗದಿಯಾಗಿದೆ. ತಪ್ಪು ಮಾಹಿತಿ ನೀಡಿ ಕಡಿಮೆ ಆಸ್ತಿ ತೆರಿಗೆ ಪಾವತಿ ಮಾಡಿದ ಆಸ್ತಿ ಮಾಲೀಕರಿಗೆ ಎರಡು ಪಟ್ಟು ದಂಡ ವಿಧಿಸಲಾಗುತ್ತಿತ್ತು. ಇದೀಗ ದಂಡ ಮೊತ್ತವನ್ನು ಇಳಿಕೆ ಮಾಡಲಾಗಿದೆ. ಈ ಅಂಶವೂ ವಸತಿ ಮತ್ತು ವಾಣಿಜ್ಯ ಸೇರಿದಂತೆ ಎಲ್ಲಾ ಮಾದರಿಯ ಆಸ್ತಿ ಮಾಲೀಕರಿಗೆ ಅನ್ವಯವಾಗಲಿದೆ.

ಉಳಿದಂತೆ ಸ್ವಂತ ಉಪಯೋಗಕ್ಕೆ ಬಳಕೆ ಮಾಡುವ ಒಂದು ಸಾವಿರ ಚದರಡಿಗಿಂತ ಕಡಿಮೆ ಇರುವ ಹಾಗೂ ಕೇವಲ ನೆಲ ಮಹಡಿ ಹೊಂದಿರುವ ಟೈಲ್ಡ್ ಅಥವಾ ಶೀಟ್‌ ಚಾವಣಿ ವಸತಿ ಆಸ್ತಿಗಳಿಗೆ ಶೇ.75ರಷ್ಟು ವಿನಾಯಿತಿ ನೀಡಿ, ವಂಚಿಸಿದ ಮೊತ್ತಕ್ಕೆ ಶೇ.25ರಷ್ಟು ದಂಡ ಪಾವತಿಸುವುದಕ್ಕೆ ಸೂಚಿಸಲಾಗಿದೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಪ್ಲಾಸ್ಟಿಕ್‌ ಗೋಡೌನ್‌ಗೆ ಬೆಂಕಿ : ಸುಟ್ಟು ಕರಕಲಾದ 30ಕ್ಕೂ ಹೆಚ್ಚು ಆಟೋಗಳು..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆ ಸಾ*ವು..!

ಉಡುಪಿ : 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶವಿದೆ. ಹಾಗಾಗಿ ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಪಿ.ಯಶೋಧಾ ನಾರಾಯಣ ಉಪಾಧ್ಯ

Live Cricket

Add Your Heading Text Here