Download Our App

Follow us

Home » ಜಿಲ್ಲೆ » ಹಾಸನದಲ್ಲಿ ಪ್ರಜ್ವಲ್​​ ವಿರುದ್ಧ ಭುಗಿಲೆದ್ದ ಆಕ್ರೋಶ : 113 ಸಂಘಟನೆಗಳ ಕಾರ್ಯಕರ್ತರಿಂದ ಬೃಹತ್ ಪ್ರೊಟೆಸ್ಟ್..!

ಹಾಸನದಲ್ಲಿ ಪ್ರಜ್ವಲ್​​ ವಿರುದ್ಧ ಭುಗಿಲೆದ್ದ ಆಕ್ರೋಶ : 113 ಸಂಘಟನೆಗಳ ಕಾರ್ಯಕರ್ತರಿಂದ ಬೃಹತ್ ಪ್ರೊಟೆಸ್ಟ್..!

ಹಾಸನ : ಪೆನ್‍ಡ್ರೈವ್ ಕೇಸಲ್ಲಿ ಸಿಲುಕಿ ವಿದೇಶಕ್ಕೆ ಪರಾರಿಯಾಗಿದ್ದ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಸ್ ಆಗೋದಕ್ಕೆ ಕೌಂಟ್‍ಡೌನ್ ಶುರುವಾಗಿದೆ. ಎಲ್ಲಾ ಅಂದ್ಕೊಂಡಂತೆ ಆದ್ರೆ ಜರ್ಮನಿಯ ಮ್ಯೂನಿಕ್‍ನಲ್ಲಿ ಗುರುವಾರ ಮಧ್ಯಾಹ್ನ 3.30ಕ್ಕೆ ಲುಫ್ತಾನ್ಸಾ ಏರ್ ಲೈನ್ಸ್ ವಿಮಾನ ಹತ್ತಲಿದ್ದಾರೆ. ಅಂದಾಜು 8 ಗಂಟೆಗಳ ಪ್ರಯಾಣದ ಬಳಿಕ ಮಧ್ಯರಾತ್ರಿ 12.30ಕ್ಕೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ.

ಇದೀಗ ಪ್ರಜ್ವಲ್​​ ವಾಪಾಸಾಗುವ ಹೊತ್ತಲ್ಲೇ ಹಾಸನದಲ್ಲಿ ಪ್ರಜ್ವಲ್​​ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. 113 ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಸಾವಿರಾರು ಮಹಿಳೆಯರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಹಾಸನ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಹಾಸನ ಚಲೋ ನಡೆದಿದ್ದು, ಈ ಪ್ರತಿಭಟನೆಯಲ್ಲಿ 10,000ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಹೋರಾಟಗಾರರು ಹಾಸನಕ್ಕೆ ಬಂದಿದ್ದರು.

ಪ್ರತಿಭಟನೆ ವೇಳೆ ಸುಭಾಷಿನಿ ಅಲಿ, ಎಸ್​.ಬಾಲನ್​ ಸೇರಿದಂತೆ ಹಲವು ಮುಖಂಡರ ಭಾಷಣ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ್ತಿ ಸುಭಾಷಿಣಿ ಅಲಿ ಭಾಗಿಯಾಗಿದ್ದು, ಊಳಿಗಮಾನ್ಯ ಯಜಮಾನಿಕೆ, ಲೈಂಗಿಕ ದೌರ್ಜನ್ಯ ವಿರೋಧಿಸಿ ಚಲೋ ನಡೆದಿದೆ.

ಇದನ್ನೂ ಓದಿ : ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್​​ಗೆ ಮೇಜರ್ ಟ್ವಿಸ್ಟ್ : ಚಂದ್ರಶೇಖರ್ ಮೇಲೆ ನೇರ ಒತ್ತಡ ಹೇರಿದ್ದ ಸಚಿವರು..!

Leave a Comment

DG Ad

RELATED LATEST NEWS

Top Headlines

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು – ತಾಯಿ, ಮಗ ಸ್ಥಳದಲ್ಲೇ ಸಾವು..!

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ನಡೆದಿದೆ. ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರಿನಲ್ಲಿ

Live Cricket

Add Your Heading Text Here