Download Our App

Follow us

Home » ರಾಜಕೀಯ » ಪಾಕ್​ ಪರ​ ಘೋಷಣೆ ಕೇಸ್ : FSL ವರದಿ ನಿಮ್ಮ ಸುಳ್ಳನ್ನು ಬಹಿರಂಗಪಡಿಸಿದೆ – ಸರ್ಕಾರದ ವಿರುದ್ಧ ಬಿಜೆಪಿ ಕಿಡಿ..!

ಪಾಕ್​ ಪರ​ ಘೋಷಣೆ ಕೇಸ್ : FSL ವರದಿ ನಿಮ್ಮ ಸುಳ್ಳನ್ನು ಬಹಿರಂಗಪಡಿಸಿದೆ – ಸರ್ಕಾರದ ವಿರುದ್ಧ ಬಿಜೆಪಿ ಕಿಡಿ..!

ಬೆಂಗಳೂರು : ಪಾಕಿಸ್ತಾನ ಜಿಂದಾಬಾದ್​ ಘೋಷಣೆ ಪ್ರಕರಣ ಸಂಬಂಧ ಸರ್ಕಾರದ ವಿರುದ್ಧ ಬಿಜೆಪಿ FSL ರಿಪೋರ್ಟ್ ಬಾಂಬ್ ಸಿಡಿಸಿದೆ. ಟ್ವೀಟ್​-Xನಲ್ಲಿ ಖಾಸಗಿ FSL ವರದಿ ಅಟ್ಯಾಚ್ ಮಾಡಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ.

ಈ ಬಗ್ಗೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್​-X ನಲ್ಲಿ ಆಕ್ರೋಶ ವ್ಯಕ್ತಪಡಿಸಿದೆ. ಸತ್ಯವನ್ನೇ ತಿರುಚಿ ಸುಳ್ಳೆಂದು ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ, ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದು ಈಗ ಸಾಬೀತಾಗಿದೆ. ವೈಜ್ಞಾನಿಕ ವರದಿ ನಿಮ್ಮ ಸುಳ್ಳನ್ನು ಬಹಿರಂಗಪಡಿಸಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು ತಿರುಚಿದ್ರಿ, “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ.

ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥ ಪ್ರಿಯಾಂಕ್ ಖರ್ಗೆಯವರೇ.. ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು, ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ. ಕನ್ನಡಿಗರ ಕ್ಷಮೆ ಕೋರಬೇಕು ಎಂದು ಬಿಜೆಪಿ ಟ್ವೀಟ್​-Xನಲ್ಲಿ ಬರೆದುಕೊಂಡಿದೆ.

ಇದನ್ನೂ ಓದಿ : ರಾಮೇಶ್ವರಂ ಕೆಫೆ ಸ್ಫೋಟ : ಶಂಕಿತ ವ್ಯಕ್ತಿ ಬಸ್​​ನಿಂದ​ ಇಳಿದು ಹೋಗುವ ವಿಡಿಯೋ ಲಭ್ಯ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here