Download Our App

Follow us

Home » ರಾಜ್ಯ » ಪಾಕಿಸ್ತಾನ್​ ಜಿಂದಾಬಾದ್​ ಘೋಷಣೆ : ತನಿಖೆಗಾಗಿ ಮೂರು ವಿಶೇಷ ತಂಡಗಳ ರಚನೆ..!

ಪಾಕಿಸ್ತಾನ್​ ಜಿಂದಾಬಾದ್​ ಘೋಷಣೆ : ತನಿಖೆಗಾಗಿ ಮೂರು ವಿಶೇಷ ತಂಡಗಳ ರಚನೆ..!

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ್​ ಜಿಂದಾಬಾದ್​ ಘೋಷಣೆ ವಿಚಾರ ಸಂಬಂಧ ತನಿಖೆಗೆ ಕೇಂದ್ರ ವಿಭಾಗ ಡಿಸಿಪಿ ಶೇಖರ್ 3 ತಂಡ ರಚನೆ ಮಾಡಿದ್ದಾರೆ. ಈ ತನಿಖಾ ತಂಡ ಟೆಕ್ನಿಕಲ್ ಅನಾಲಿಸಿಸ್ ಮಾಡಲಿದೆ, ಹಾಗೆಯೇ ವಿಧಾನಸೌಧಕ್ಕೆ ನಾಸೀರ್ ಹುಸೇನ್ ಜೊತೆ ಬಂದಿದ್ದವರಿಂದ ಮಾಹಿತಿ ಸಂಗ್ರಹಿಸಲಿದೆ.

ಅಷ್ಟೆ ಅಲ್ಲದೆ ವಿಡಿಯೋಗಳನ್ನ ಪರಿಶೀಲನೆ ಮಾಡಿ ಪೊಲೀಸರು ಗುರುತಿಸಲಿದ್ದಾರೆ. ಘೋಷಣೆ ಕೂಗಿದವರನ್ನ ವಶಕ್ಕೆ ಪಡೆಯಲು ಹುಡುಕಾಟ ನಡೆಸುತ್ತಿದ್ದು, ಈಗಾಗಲೇ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ FIR ದಾಖಲಾಗಿದೆ. ಕಮಿಷನರ್ ಬಿ.ದಯಾನಂದ್ ಘಟನೆ ಬಗ್ಗೆ ವಿವರ ಪಡೆದಿದ್ದಾರೆ. ಘೋಷಣೆ ಕೂಗಿದ ಸಂದರ್ಭದಲ್ಲಿ ನಾಸೀರ್ ಹುಸೇನ್ ಬಳಿ ಇದ್ದ ವ್ಯಕ್ತಿಗಳನ್ನು ಕರೆಸಿ ಇಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಈ ಮಧ್ಯೆ, ಡಾ.ಜಿ.ಪರಮೇಶ್ವರ್​​ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಗೃಹ ಸಚಿವರ ನಿವಾಸಕ್ಕೆ ಕಾನೂನು ಸುವ್ಯವಸ್ಥೆ ADGP ಹಿತೇಂದ್ರ, ಬೆಂಗಳೂರು ಪೊಲೀಸ್​ ಕಮಿಷನರ್​​​ ಬಿ.ದಯಾನಂದ್ ಅವರು​​​ ಭೇಟಿ ನೀಡಿದ್ದಾರೆ. ಗೃಹ ಸಚಿವರಿಗೆ ಪೊಲೀಸ್ ಅಧಿಕಾರಿಗಳು ಎಲ್ಲಾ ಮಾಹಿತಿ ನೀಡಿದ್ದಾರೆ.

ಹಾಗೆಯೇ ಪಾಕ್​ ಪರ ಘೋಷಣೆ ವಿರುದ್ಧ ಸದನದ ಒಳಗೂ, ಹೊರಗೂ ಬಿಜೆಪಿ ಪ್ರತಿಭಟನೆ ನಡೆಸಲಿದೆ. ವಿಪಕ್ಷ ನಾಯಕ ಆರ್​​.ಅಶೋಕ್​ ನೇತೃತ್ವದಲ್ಲಿ ಶಾಸಕರ ಭವನದ ಗೇಟ್​ನಿಂದ ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆವರೆಗೆ ಮೆರವಣಿಗೆ ನಡೆಯಲಿದೆ. ಬಿ.ವೈ.ವಿಜಯೇಂದ್ರ ಸೇರಿದಂತೆ ಬಿಜೆಪಿ MLAಗಳು, MLCಗಳು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ : ‘ಹೈಡ್ ಅಂಡ್ ಸೀಕ್’ ಸಿನಿಮಾದ ಟ್ರೈಲರ್‌ ರಿಲೀಸ್ ಮಾಡಿದ ಸಚಿವ ರಾಮಲಿಂಗಾರೆಡ್ಡಿ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here